corona update ರಾಜ್ಯದಲ್ಲಿ ಮತ್ತೆ ಕೊರೊನಾ ಸ್ಫೋಟ : ಒಂದೇ ದಿನ 1,275 ಮಂದಿಗೆ ಸೋಂಕು
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಹೆಮ್ಮಾರಿ ಆರ್ಭಟಿಸಿದ್ದು, ಬುಧವಾರ ಒಂದೇ ದಿನ 1,275 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ನಿನ್ನೆ ಕೊರೊನಾಗೆ ನಾಲ್ಕು ಮಂದಿ ಬಲಿಯಾಗಿದ್ದರೇ 475 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,63,614ಕ್ಕೆ ಏರಿಕೆ ಆಗಿದ್ದು, ಈ ಪೈಕಿ 9,40,968 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 10,220 ಸಕ್ರಿಯ ಪ್ರಕರಣಗಳಿವೆ.

ಇಲ್ಲಿಯವರೆಗೆ ಒಟ್ಟು 12,407 ಮಂದಿ ಮೃತಪಟ್ಟಿದ್ದಾರೆ. ಐಸಿಯುನಲ್ಲಿ 134 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಲ್ಲಿ ಮತ್ತೆ ಅಬ್ಬರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಬ್ಬರ ಜೋರಾಗಿದೆ. ಬುಧವಾರ ನಗರದಲ್ಲಿ 786 ಮಂದಿಗೆ ಕೊರೊನಾ ದೃಢಪಟ್ಟಿದೆ. ಇನ್ನು ದಕ್ಷಿಣ ಕನ್ನಡದಲ್ಲಿ 72, ಕಲಬುರಗಿ 61, ಉಡುಪಿ 42, ಮೈಸೂರು 35 ಮಂದಿಗೆ ಸೋಂಕಿರುವುದು ದೃಢವಾಗಿದೆ.









