ಮಲೆನಾಡಿಗರಿಗೆ ಸಿಹಿ ಸುದ್ದಿ : ಚಾರ್ಮಾಡಿ ಘಾಟ್ ನಲ್ಲಿ ಬಸ್ ಸಂಚಾರಕ್ಕೆ ಅವಕಾಶ
ಚಿಕ್ಕಮಗಳೂರು : ಕಳೆದ 18 ತಿಂಗಳಿನಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಸ್ ಸಂಚಾರಕ್ಕೆ ಹಾಕಿದ್ದ ನಿರ್ಬಂಧವನ್ನ ತೆಗೆದು ಹಾಕಲಾಗಿದೆ. ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸರ್ಕಾರಿ ಬಸ್‍ಗಳ ಸಂಚಾರಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಸಮ್ಮತಿ ನೀಡಿದೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರು ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟು ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರಕಾರ ಸರ್ಕಾರಿ ಬಸ್, 6 ಚಕ್ರದ ಲಾರಿ ಹಾಗೂ ಲಘು ವಾಹನಗಳ ಸಂಚಾರಕ್ಕೆ ಅವಕಾಶವಿದೆ. ಆದ್ರೆ 6 ಚಕ್ರ ಮೇಲ್ಪಟ್ಟ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಅಂದಹಾಗೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಬೇಕೆಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಮಂದಿ ಒತ್ತಾಯಿಸಿದ್ದರು.
ಈ ಮಾರ್ಗದ ಮೇಲೆ ಸಾಕಷ್ಟು ಮಂದಿ ಅವಲಂಭಿತರಾಗಿದ್ದು, ಆರೋಗ್ಯ ಸಂಬಂಧಿಸಿದಂತೆ ತುರ್ತು ಸಂದರ್ಭದಲ್ಲಿ ಮಂಗಳೂರು-ಉಡುಪಿ ಹೋಗಲು ಚಾರ್ಮಾಡಿ ಘಾಟ್ ಮೇಲೆ ಹೋಗಬೇಕಿತ್ತು. ಆದ್ರೆ 2019ರ ಆಗಸ್ಟ್ ನಲ್ಲಿ ಉರಿದ ಮಳೆಯಿಂದಾಗಿ ಚಾರ್ಮಾಡಿ ಘಾಟ್ ಕುಸಿದಿತ್ತು.










