ಸರ್ಕಾರಿ ನೌಕರರ ವೇತನವನ್ನು ಲಾಕ್ ಡೌನ್ ನೆಪದಲ್ಲಿ ಕಡಿತಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಏಪ್ರಿಲ್ 14ರ ನಂತರ ಲಾಕ್ ಡೌನ್ ಮುಂದುವರಿದರೆ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ವಿಚಾರ ಊಹಾಪೋಹದಿಂದ ಕೂಡಿದೆ. ಸರ್ಕಾರ ಯಾವುದೇ ಕಾರಣಕ್ಕೂ ಸರ್ಕಾರಿ ನೌಕರರ, ಸಿಬ್ಬಂದಿಗಳ ವೇತನ ಕಡಿತ ಮಾಡಲ್ಲ. ಸರ್ಕಾರಿ ಸಿಬ್ಬಂದಿಗಳಿಗೆ ಸಂಬಳ ನೀಡದಿರುವಷ್ಟರ ಮಟ್ಟಿಗೆ ಸರ್ಕಾರಕ್ಕೆ ದಾರಿದ್ರ್ಯ ಬಂದಿಲ್ಲ. ಅವರಿಗೆ ಕೆಲಸ ಮಾಡಬೇಡಿ ಎಂದು ನಾವು ಹೇಳಿದ್ದೇವೆ. ಹೀಗಾಗಿ ಅವರ ಸಂಬಳ ನೀಡದಿರುವುದು ಸರಿಯಲ್ಲ. ಅವರು ಮನೆಯಲ್ಲೇ ಇದ್ದರೂ ಅವರಿಗೆ ಮನೆ ಬಾಡಿಗೆ, ಇಎಂಐ, ಸಾಲದ ಬಡ್ಡಿ ಸೇರಿದಂತೆ ಅನೇಕ ಖರ್ಚುಗಳಿರುತ್ತವೆ. ಸದ್ಯ ಜನರು ನೆಮ್ಮದಿಯಾಗಿ ಉಸಿರಾಡಿ ಜೀವನ ನಡೆಸುವಂತೆ ಮಾಡುವುದು ಮುಖ್ಯ ಎಂದು ಹೇಳಿದ್ದಾರೆ.
ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...








