ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ ಪ್ರಕಟ..!
Suryakumar, Prasidh, Krunal picked for England ODIs
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ತಂಡದಲ್ಲಿ ಕರ್ನಾಟಕದ ಯುವ ವೇಗಿ ಪ್ರಸಿದ್ಧ್ ಕೃಷ್ಣ, ಹೊಡಿಬಡಿ ಆಟಗಾರ ಸೂರ್ಯಕುಮಾರ್ ಯಾದವ್ ಮತ್ತು ಆಲ್ ರೌಂಡರ್ ಕೃನಾಲ್ ಪಾಂಡ್ಯ ಅವರು ಹೊಸ ಮುಖಗಳಾಗಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.
ಸೂರ್ಯಕುಮಾರ್ ಯಾದವ್ ಈಗಾಗಲೇ ಟಿ-ಟ್ವೆಂಟಿ ಸರಣಿಯ ನಾಲ್ಕನೇ ಪಂದ್ಯದಲ್ಲಿ ಅದ್ಭುತವಾದ ಪ್ರದರ್ಶನವನ್ನು ನೀಡಿದ್ದಾರೆ. ಜೊತೆಗೆ ಐಪಿಎಲ್‍ನಲ್ಲೂ ಅಮೋಘ ಆಟವನ್ನಾಡಿದ್ದಾರೆ. ಅದೇ ರೀತಿ ಪ್ರಸಿದ್ಧ್ ಕೃಷ್ಣ ಮತ್ತು ಕೃನಾಲ್ ಪಾಂಡ್ಯ ಕೂಡ ಕಳೆದ ಐಪಿಎಲ್ ನಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ್ದರು. ಅದೇ ರೀತಿ ಇತ್ತೀಚೆಗೆ ನಡೆದ ವಿಯಜ್ ಹಜಾರೆ ಟೂರ್ನಿಯಲ್ಲಿ ಗಮನ ಸೆಳೆಯುವಂತಹ ಪ್ರದರ್ಶನವನ್ನು ನೀಡಿದ್ದರು.
Suryakumar, Prasidh, Krunal picked for England ODIs
ಇನ್ನು ಜಸ್ಪ್ರಿತ್ ಬೂಮ್ರಾ ಅವರು ಮದುವೆಯ ರಜೆಯಲ್ಲಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಮಹಮ್ಮದ್ ಶಮಿ ಅವರನ್ನು ಆಯ್ಕೆಗೆ ಪರಿಗಣಿಸಲಿಲ್ಲ. ಹಾಗೇ ವಿಜಯ್ ಹಜಾರೆ ಟೂರ್ನಿಯಲ್ಲಿ ರನ್ ಮಳೆ ಸುರಿಸಿದ್ದ ಪೃಥ್ವಿ ಶಾ ಮತ್ತು ಕರ್ನಾಟಕದ ದೇವದತ್ ಪಡಿಕ್ಕಲ್ ಅವರನ್ನು ಕೂಡ ಆಯ್ಕೆಗೆ ಪರಿಗಣಿಸಿಲ್ಲ.
ಇಂಗ್ಲೆಂಡ್ ವಿರುದ್ಧದ ಸರಣಿಗೆ ಭಾರತ ಏಕದಿನ ತಂಡ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್, ಕೆ.ಎಲ್. ರಾಹುಲ್, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಕೃನಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಟಿ.ನಟರಾಜನ್, ಭುವನೇಶ್ವರ್ ಕುಮಾರ್, ಮಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಥಾಕೂರ್.
#teamindia #england #suryakumaryadav #krunalpandya #prasidhkrishna #saakshatv #saakshatvsports #bcci