ಕೊರೊನಾಸುರ ರಾಜ್ಯದ ಜನರಲ್ಲಿ ಆತಂಕ ಹೆಚ್ಚು ಮಾಡಿದ್ದಾನೆ. ಲಾಕ್ ಡೌನ್ ಮಾಡಿದ ಬಳಿಕ ಜನ ಸಾಮಾನ್ಯರ ಬದುಕು ಅತಂತ್ರ ಪರಿಸ್ಥಿತಿಯಲ್ಲಿದೆ. ಈ ನಡುವೆ ಕೊರೊನಾ ಬಗ್ಗೆ ಕೆಲವು ಸುಳ್ಳು ಸುದ್ದಿಗಳು ಹರಡುತ್ತಿದ್ದಾವೆ. ಇದು ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಹಾಗಾಗಿ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಕೆಲವು ದಿನಗಳ ಹಿಂದೆ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿತ್ತು. ಕರ್ನಾಟಕ ಸರ್ಕಾರ, ಆರೋಗ್ಯ ಇಲಾಖೆ, ಸಾಮಾಜಿಕ ಕಾರ್ಯಕರ್ತರು, ವೈದ್ಯರು, ಪೊಲೀಸರ ಶ್ರಮದಿಂದ ಕೊರೊನಾ ಪ್ರಕರಣಗಳು ಕಡಿಮೆಯಾಗಿವೆ. ಈಗ 207 ಪ್ರಕರಣಗಳಿದ್ದು ಕರ್ನಾಟಕ ದೇಶದಲ್ಲಿ 11ನೇ ಸ್ಥಾನದಲ್ಲಿದೆ. ಆದರೆ ಕೆಲ ಮಾಧ್ಯಮಗಳು ನಮ್ಮ ರಾಜ್ಯ ಅತ್ಯಂತ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಬಿಂಬಿಸುತ್ತಿದ್ದಾವೆ. ಸರ್ಕಾರದ ಕಡೆಯಿಂದ ಯಾವತ್ತೂ ಗಾಬರಿಯಾಗುವಂತಹ ಹೇಳಿಕೆಗಳು ದಾಖಲು ಆಗಿಲ್ಲ. ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಎಷ್ಟೇ ಪ್ರಕರಣಗಳು ಬಂದರೂ ನಮ್ಮಲ್ಲಿ ತಂತ್ರಜ್ಞಾನಗಳಿವೆ, ಆಸ್ಪತ್ರೆಗಳಿವೆ, ಮಾನವ ಸಂಪನ್ಮೂಲಗಳಿವೆ. ಆದ್ದರಿಂದ ಆತಂಕಗೊಳ್ಳುವುದು ಬೇಡ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್
ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...








