ಬೈ ಎಲೆಕ್ಷನ್ | ಪಕ್ಷ ಬಯಸಿದರೆ ಸ್ಪರ್ಧೆ ಎಂದು ಸತೀಶ್ ಜಾರಕಿಹೊಳಿ ( Sathish jarakiholi )
ಬೆಂಗಳೂರು : ಬೆಳಗಾವಿ ಲೋಕಸಭೆ ಟಿಕೆಟ್ ಬಗ್ಗೆ ಸಮಗ್ರ ಚರ್ಚೆಯಾಗಿದೆ. ಪಕ್ಷ ಬಯಸಿದರೆ ಸ್ಪರ್ಧೆ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೈ ಎಲೆಕ್ಷನ್ ಹಿನ್ನೆಲೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಸಭೆಯಲ್ಲಿ ಬೆಳಗಾವಿ ಲೋಕಸಭೆ ಟಿಕೆಟ್ ಬಗ್ಗೆ ಸಮಗ್ರ ಚರ್ಚೆಯಾಗಿದೆ.
ನನ್ನ ಜೊತೆ ಇನ್ನಿಬ್ಬರ ಹೆಸರು ರವಾನಿಸಲಾಗಿದೆ. ಇಲ್ಲಿ ನನಗಿಷ್ಟ ಇದೆ ಇಲ್ಲ ಅನ್ನೋದು ಅಲ್ಲ, ಪಕ್ಷ ಬಯಸಿದರೆ ಸ್ಪರ್ಧೆ ಮಾಡಬೇಕಾಗುತ್ತದೆ ಎಂದು ಎಲೆಕ್ಷನ್ ಗೆ ಸ್ಪರ್ಧಿಸುವ ಬಗ್ಗೆ ಇಂಗಿತ ವ್ಯಕ್ತಪಡಿಸಿದರು.
ಇನ್ನು ನಾನು ಕೂಡ ಒಮ್ಮೆ ಹೈಕಮಾಂಡ್ ಭೇಟಿ ಮಾಡುತ್ತೇನೆ. ನಂತರ ಚುನಾವಣೆ ಸ್ಪರ್ಧೆ ಬಗ್ಗೆ ನಿರ್ಧಾರ ಮಾಡುತ್ತೇನೆ.
ನನ್ನ ಹೆಸರಲ್ಲದೇ ಪ್ರಕಾಶ್ ಹುಕ್ಕೇರಿ ಹೆಸರು ಕೂಡ ದೆಹಲಿಗೆ ಕಳಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.










