ಕೊರೊನಾಗೆ ಡೋಂಟ್ ಕೇರ್ : ನಂದಿ ಬೆಟ್ಟದಲ್ಲಿ ಜನವೋ ಜನ..!!
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕೊರೊನಾ ಅಬ್ಬರ ಜೋರಾಗಿದ್ದು, ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳಿ ಎಂದು ಮನವಿ ಮಾಡಿಕೊಳ್ಳುತ್ತಿದೆ.
ರಾಜ್ಯದಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ಇದು ಎಲ್ಲರಲ್ಲೂ ಆತಂಕಕ್ಕೆ ಕಾರಣವಾಗಿದೆ. ಆದ್ರೂ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ.
ರಾಜ್ಯದಲ್ಲಿ ಮತ್ತೆ ಕೊರೊನಾ ನರ್ತನ ಶುರುವಾಗಿದೆ ಎಂದು ತಿಳಿದಿದ್ದರೂ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಬಳಿಯ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬೆಳ್ಳಂಬೆಳಗ್ಗೆ ಸಾವಿರಾರು ಪ್ರವಾಸಿಗರ ದಂಡು ಆಗಮಿಸಿದೆ.
ಕಾರು-ಬೈಕ್ ಗಳಲ್ಲಿ ನಂದಿಬೆಟ್ಟಕ್ಕೆ ಪ್ರವಾಸಿಗರು ಲಗ್ಗೆಯಿಡುತ್ತಿದ್ದಾರೆ. ಇದು ಜಿಲ್ಲಾಡಳಿತದ ಆತಂಕಕ್ಕೆ ಕಾರಣವಾಗಿದೆ.
ಇನ್ನ ಪ್ರವಾಸಿಗರು ಕೊರೊನಾವನ್ನ ಮರೆತಂತೆ ಕಾಣುತ್ತಿದ್ದು, ಮಾಸ್ಕ್ ಧರಿಸದೆ ಸಾಮಾಜಿಕ ಅಂತರ ಕಾಪಿಟ್ಟುಕೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ.










