ಮುಂದಿನ ವಾರ “ರಾಜ್ಯದಲ್ಲಿ ಸೆಮಿ ಲಾಕ್ ಡೌನ್ ಜಾರಿ”..!
ಹುಬ್ಬಳ್ಳಿ : ದೇಶದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿದೆ. ನಿನ್ನೆ ದೇಶದಲ್ಲಿ ಬರೋಬ್ಬರಿ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದೆ.
ಈ ಮಧ್ಯೆ ರಾಜ್ಯದಲ್ಲೂ ಕೂಡ ಕೊರೊನಾ ಅಬ್ಬರ ಹೆಚ್ಚಾಗಿದ್ದು, ಲಾಕ್ ಡೌನ್ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಈ ಮಧ್ಯೆ ರಾಜ್ಯದಲ್ಲಿ ಕೊರೊನಾ ತೀವ್ರಗೊಳ್ಳುತ್ತಿದೆ. ಇದನ್ನ ತಡೆಯಲು ತಜ್ಞರ ಸಮಿತಿ ನೈಟ್ ಕಫ್ರ್ಯೂ, ಸೆಮಿ ಲಾಕ್ ಡೌನ್ ಮಾಡುವ ಬಗ್ಗೆ ಸಲಹೆ ನೀಡಿದ್ದಾರೆ.
ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸುವುದಾಗಿ ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ.
ಹುಬ್ಬಳ್ಳಿ ಛಬ್ಬಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೊರೊನಾ ಲಾಕ್ ಡೌನ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅಶೋಕ್, ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತೀವ್ರಗೊಳ್ಳುತ್ತಿದೆ.
ಹೀಗಾಗಿ ಸೆಮಿ ಲಾಕ್ ಡೌನ್ ಮಾಡುವ ಬಗ್ಗೆ ತಜ್ಞರಿಂದ ಸಲಹೆ ಬಂದಿದೆ. ಈ ಕುರಿತು ನಾನು ಈಗಾಗಲೇ ಬೆಂಗಳೂರು ಪಾಲಿಕೆ ಕಮೀಷನರ್ ಜೊತೆಯೂ ಚರ್ಚೆ ನಡೆಸಿದ್ದೇನೆ.
ನಾವೆಲ್ಲಾ ಕೊರೊನಾ ಮಧ್ಯೆಯೇ ಬದುಕಬೇಕಾಗಿದೆ. ಇನ್ನೊಂದು ವಾರ ಬಿಟ್ಟು ಪರಿಸ್ಥಿತಿ ಅವಲೋಕಿಸಿ ಸೆಮಿ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಜೊತೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
ಅಂದಹಾಗೆ ಸಚಿವ ಆರ್.ಅಶೋಕ್ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಕಳೆದ ರಾತ್ರಿ ಗ್ರಾಮ ವಾಸ್ತವ್ಯ ಮಾಡಿದ್ದರು.










