74 ವರ್ಷದ ವೃದ್ಧನ ಹತ್ಯೆ ಪ್ರಕರಣ : ಮೂವರು ಬಿಜೆಪಿ ಕಾರ್ಯಕರ್ತರ ಬಂಧನ..!
ಪಶ್ಚಿಮ ಬಂಗಾಳ: 74 ವರ್ಷದ ವೃದ್ಧರೊಬ್ಬರ ಹತ್ಯೆ ಪ್ರಕರಣ ಸಂಬಂಧ ಮೂವರು ಬಿಜೆಪಿ ಕಾರ್ಯಕರ್ತರನ್ನ ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಪಶ್ಚಿಮ ಬಂಗಾಳದ ಪುರ್ಬಾ ಬರ್ದಾಮನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಶುಕ್ರವಾರ ಸ್ಥಳೀಯ ಬಿಜೆಪಿ ಮುಖಂಡರನ್ನ ಬಂಧಿಸಲಾಗಿದ್ದು, ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಮೂವರನ್ನೂ ಸಹ 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಮಾರ್ಚ್ 9 ರಂದು ರಾನಾ ಪೊಲೀಸ್ ಠಾಣೆ ಪ್ರದೇಶದ ಮನೆಯಲ್ಲಿ ವೃದ್ಧನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಘಟನೆ ನಡೆದ ದಿನ ವೃದ್ಧ ಬ್ಯಾಂಕ್ ನಿಂದ ಹಣ ವಿತ್ ಡ್ರಾ ಮಾಡಿಕೊಂಡು ಬಂದಿದ್ದು, ಅದನ್ನು ದೋಚುವ ಪ್ರಯತ್ನ ನಡೆದಿದೆ. ಆದ್ರೆ ಈ ವೇಳೆ ವೃದ್ಧನಿಗೆ ಆಕಸ್ಮಿಕವಾಗಿ ಗುಂಡು ತಗಲಿದ್ದು, ಆತ ಮೃತಪಟ್ಟಿರೋದಾಗಿ ಆರೋಪಿಯೊಬ್ಬನು ಒಪ್ಪಿಕೊಂಡಿರೋದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ತನಿಖೆ ಮುಂದುವರೆದಿದೆ.
ಮಾಸ್ಕ್ ಧರಿಸುವಂತೆ ಹೇಳಿದ್ದೇ ತಪ್ಪಾ… ಮಾರ್ಷಲ್ ಜುಟ್ಟು ಹಿಡಿದು ಹೊಡೆದ ಮಹಿಳೆ..! VIDEO VIRAL
ಆಸ್ಟ್ರೇಲಿಯಾದಲ್ಲಿ ರಣಭೀಕರ ಪ್ರವಾಹ : ಸುರಕ್ಷಿತ ಸ್ಥಳಗಳಿಗೆ ಜನರ ಸ್ಥಳಾಂತರ..!
8ನೇ ತರಗತಿ ಫೇಲಾದವನಿಂದ ಶಸ್ತ್ರಚಿಕಿತ್ಸೆ- ತಾಯಿ, ಮಗು ದುರ್ಮರಣ