ಅಶ್ಲೀಲ ವಿಡಿಯೋ ವೀಕ್ಷಣೆ… 12 ವರ್ಷದ ಬಾಲಕನಿಂದ 6ರ ಬಾಲಕಿ ಮೇಲೆ ಅತ್ಯಾಚಾರ…! Rape
ರಾಜಸ್ಥಾನ: ಮೊಬೈಲ್ ನಲ್ಲಿ ಅಶ್ಲೀಲ ವೀಡಿಯೊಗಳನ್ನು ನೋಡಿದ 12 ವರ್ಷದ ಬಾಲಕನೊಬ್ಬ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಶ್ರೀಗಂಗನಗರದಲ್ಲಿ ನಡೆದಿದೆ.
ಈ ಸಂಬಂಧ ಪೋಷಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಪೋಷಕರು ದೂರು ಆರಂಭಿಸಿ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಬಾಲಕ ಅಶ್ಲೀಲ ವಿಡಿಯೋಗಳನ್ನು ನೋಡಿ ಬಳಿಕ ಅತ್ಯಾಚಾರ ಎಸಗಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಬಾಲಕನ ವಿಚಾರಣೆ ಬಳಿಕ ಬಾಲಕನನ್ನು ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು. ನ್ಯಾಯಾಲಯವು ಆತನನ್ನ ಬಾಲಾಪರಾಧಿ ಗೃಹಕ್ಕೆ ಕಳುಹಿಸಿದೆ.










