ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ : ನಾವೇ ಚಾಂಪಿಯನ್ಸ್..!!
ರಾಯಪುರ : ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಲೆಜೆಂಡ್ಸ್ ತಂಡ ಗೆಲುವಿನ ಕೇಕೆ ಹಾಕಿದೆ. ಶ್ರೀಲಂಕಾ ಲೆಜೆಂಡ್ಸ್ ವಿರುದ್ಧ ಭಾರತ ಲೆಜೆಂಡ್ಸ್ ತಂಡ 14 ರನ್ ಗಳ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಎತ್ತಿಹಿಡಿದಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತದ ವೀರೇಂದ್ರ ಸೆಹ್ವಾಗ್ 10 ರನ್, ಸಚಿನ್ 30 ರನ್ ಗಳಿಸಿದರೆ, ಯುವರಾಜ್ ಸಿಂಗ್ 60 ಮತ್ತು ಯೂಸುಫ್ ಪಠಾಣ್ ಅಜೇಯ 62 ರನ್ ಗಳಿಸಿದರು. ಪರಿಣಾಮ ನಿಗದಿತ 20 ಓವರ್ ಗಳಲ್ಲಿ ಭಾರತ ತಂಡ 4 ವಿಕೆಟ್ ನಷ್ಟಕ್ಕೆ 181ರನ್ ಕಲೆಹಾಕಿತು.
ಈ ಗುರಿ ಬೆನ್ನತ್ತಿದ ಶ್ರೀಲಂಕಾ ಲೆಜೆಂಡ್ಸ್ ತಂಡ ನಿಗದಿತ 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಲಷ್ಟೇ ಶಕ್ತವಾಯಿತು. ಲಂಕಾ ಪರ ಸನತ್ ಜಯಸೂರ್ಯ 43, ಚಿಂತಕ ಜಯಸಿಂಘೆ 40 ಮತ್ತು ವೀರರತ್ನೆ 38 ರನ್ ಗಳಿಸಿದರು. ಅಂತಿಮವಾಗಿ ಲಂಕಾ ಲೆಜೆಂಡ್ಸ್ ತಂಡ 14 ರನ್ ಗಳಿಂದ ಭಾರತದ ಎದುರು ಸೋಲೊಪ್ಪಿಕೊಂಡಿತು.









