45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲೇಬೇಕು : ಜಾವೇಡ್ಕರ್
ದೇಶದಲ್ಲಿ ಕೊರೊನಾ 2ನೇ ಜೋರಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಕಡ್ಡಾಯವಾಗಿ ಲಸಿಕೆಯನ್ನ ನೀಡಲು ನಿರ್ಧರಿಸಿದೆ.
ದೇಶದಲ್ಲಿ ಪ್ರಸ್ತುತ 60 ವರ್ಷ ಮೇಲ್ಪಟ್ಟ ಎಲ್ಲಾ ವೃದ್ಧರಿಗೆ ಹಾಗೂ 45 ವರ್ಷ ಮೇಲ್ಪಟ್ಟ ಅಸ್ವಸ್ಥರಿಗೆ ಮಾತ್ರ ಕೊರೊನಾ ಲಸಿಕೆಯನ್ನ ನೀಡಲಾಗುತ್ತಿತ್ತು. ಇದೀಗ ಹೊಸ ನಿಯಮದ ಪ್ರಕಾರ ಕೇಂದ್ರ ಸರ್ಕಾರ ಏಪ್ರಿಲ್ 1ನೇ ತಾರೀಖಿನಿಂದ 45 ವರ್ಷ ಮೇಲ್ಪಟ್ಟ ದೇಶದ ಪ್ರತಿಯೊಬ್ಬ ಜನತೆಗೆ ಕೊರೊನಾ ಲಸಿಕೆಯನ್ನ ಪೂರೈಸಲಿದೆ.
ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರವನ್ನ ಕೈಗೊಂಡಿದೆ. ಇದಕ್ಕೆ ಅರ್ಹವಿರುವವರು ತಕ್ಷಣವೇ ತಮ್ಮಹೆಸರನ್ನು ನೋಂದಾಯಿಸಿ, ಲಸಿಕೆ ಪಡೆಯಬೇಕು ಎಂದು ನಾವು ವಿನಂತಿಸಿಕೊಳ್ಳುತ್ತಿದ್ದೇವೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಬಾಲಕನಿಂದ ಚಿಕ್ಕಪ್ಪನ ಮಗಳ ಮೇಲೆ ಅತ್ಯಾಚಾರ : ಗರ್ಭಿಣಿಯಾದ ಅಪ್ರಾಪ್ತೆ..!