ಕೋವಿಡ್ ಲಸಿಕೆ ಪಡೆದ ಓವೈಸಿ : ಸಾರ್ವಜನಿಕರಿಗೆ ಲಸಿಕೆ ಪಡೆಯುವಂತೆ ಮನವಿ..!
ಹೈದರಾಬಾದ್: AIMIM ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಒವೈಕೋವಿಡ್ ಲಸಿಕೆ ಪಡೆದಿದ್ದಾರೆ. ಹೈದರಾಬಾದ್ ನ ಕಂಚನ್ ಬಾಗ್ ಆಸ್ಪತ್ರೆಯಲ್ಲಿ ಮೊದಲ ಹಂತದ ಕೊರೊನಾ ಲಸಿಕೆ ಪಡೆದಿದ ಬಳಿಕ ಈ ಕುರಿತಾಗಿ ಟ್ವೀಟ್ ಮಾಡಿರುವ ಓವೈಸಿ, ಸಾವರ್ಜನಿಕರು ಲಸಿಕೆ ಪಡೆಯುವಂತೆ ಮನವಿ ಮಾಡಿಕೊಂಡಿದ್ದಾರೆ.
‘ ನಾನು ಮತ್ತು ನನ್ನ ಪತ್ನಿ ಕೋವಿಶೀಲ್ಡ್ ಲಸಿಕೆ ತೆಗೆದುಕೊಂಡಿದ್ದೇವೆ, ಲಸಿಕೆ ಹಾಕಿಸಿಕೊಳ್ಳುವುದರಿಂದ ಸೋಂಕು ತಗಲುವುದರಿಂದ ರಕ್ಷಣೆ ನೀಡುತ್ತದೆ. ಅಷ್ಟೇ ಅಲ್ಲದೇ, ಇತರರಿಗೂ ಸೋಂಕು ಹರಡದಂತೆ ರಕ್ಷಣೆ ನೀಡುತ್ತದೆ. ಎಲ್ಲರೂ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಬೇಕು’ ಎಂದಿದ್ದಾರೆ.
ಅಷ್ಟೇ ಅಲ್ಲ ಕೋವ್ಯಾಕ್ಸಿನ್ ಲಸಿಕೆಯ ಸಾಮರ್ಥ್ಯದ ಬಗ್ಗೆಯೂ ಪ್ರಶ್ಮೆ ಎತ್ತಿದ್ದಾರೆ. ಕೋವ್ಯಾಕ್ಸಿನ್ ಬಗ್ಗೆ ಕೆಲ ದೇಶಗಳಿಗೆ ಅನುಮಾನವಿದೆ. ಕೇಂದ್ರ ಆದಷ್ಟು ಬೇಗ ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ಹೇಳಿದ್ದಾರೆ.
45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲೇಬೇಕು : ಜಾವೇಡ್ಕರ್
ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ : ಸಚಿವ ಡಾ.ಕೆ.ಸುಧಾಕರ್