ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕೆ ಸಚಿವರ ವಿರುದ್ದ ಪೊಲೀಸರಿಗೆ ರೈತ ಸಂಘ ದೂರು ನೀಡಿದೆ. ಕೊರೊನಾ ವೈರಸ್ ಭೀತಿಯಿಂದ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಜೊತೆಗೆ ಲಾಕ್ ಡೌನ್ ಉಲ್ಲಂಘನೆ ಮಾಡುವವರ ಮೇಲೆ ಕೇಸ್ ದಾಖಲು ಮಾಡಲಾಗುತ್ತಿದೆ. ಇದೀಗ ಚಾಮರಾಜನಗರ ಜಿಲ್ಲೆಯಲ್ಲಿ ಸಚಿವ ಮತ್ತು ಶಾಸಕರು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲಾ ರೈತ ಸಂಘ ದೂರು ನೀಡಿದೆ. ಚಾಮರಾಜನಗರ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಮತ್ತು ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ಇಬ್ಬರು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ. ಬಡವರಿಗೆ ಪದಾರ್ಥಗಳನ್ನು ನೀಡುವ ನೆಪದಲ್ಲಿ ತಮ್ಮ ನೂರಾರು ಬೆಂಬಲಿಗರೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ರಾಜಕೀಯ ಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ 144 ಸೆಕ್ಷನ್ ಮತ್ತು ಲಾಕ್ ಡೌನ್ ಉಲ್ಲಂಘನೆ ಮಾಡಿ, ಮಾಸ್ಕ್ ಇನ್ನಿತರ ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಅನುಸರಿಸದೇ ನಿರ್ಲಕ್ಷ್ಯದಿಂದ ಕೊರೊನಾ ಹರಡಲು ಅವಕಾಶ ಮಾಡಿಕೊಡುತ್ತಿದ್ದಾರೆ ಎಂದು ರೈತ ಸಂಘ ಆರೋಪಿಸಿದೆ. ಈ ಬಗ್ಗೆ ಚಾಮರಾಜನಗರ ಎಸ್. ಪಿ ಗೆ ದೂರು ನೀಡಿದ ರೈತ ಸಂಘ ಸಚಿವ ಸುರೇಶ್ ಕುಮಾರ್ ವಿರುದ್ದ ಕ್ರಮಕ್ಕೆ ಒತ್ತಾಯಿಸಿದೆ.
ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ
ದಕ್ಷಿಣ ಭಾರತದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲವಾದ ಹೊಡೆತ ಬಿದ್ದಿದೆ. ಕೇರಳದಲ್ಲಿ ಜಯಭೇರಿ ಬಾರಿಸಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್ಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ದೊಡ್ಡ...








