ಸಿದ್ದರಾಮಯ್ಯ, ಹೆಚ್ ಡಿಕೆ, ಡಿಕೆಶಿ ಏಕಪತ್ನಿವ್ರತಸ್ಥರಾ : ಸುಧಾಕರ್ ಪ್ರಶ್ನೆ
ಬೆಂಗಳೂರು : ಸಿದ್ದರಾಮಯ್ಯ, ಹೆಚ್ ಡಿ ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಏಕಪ್ರತ್ನಿವ್ರತಸ್ಥರಾ ಎಂದು ಸಚಿವ ಸುಧಾಕರ್ ಪ್ರಶ್ನೆ ಮಾಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ, ಶಿವಕುಮಾರ್ ಅವರು, ಕೋರ್ಟ್ ಮೊರೆ ಹೋದ ಆರು ಸಚಿವರು ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದಿದ್ದು, ಈ ಬಗ್ಗೆ ಸುಧಾಕರ್ ನಗರದಲ್ಲಿ ಪ್ರತಿಕ್ರಿಯೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸುಧಾಕರ್, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮರ್ಯಾದೆ ಪುರುಷರು, ಶ್ರೀರಾಮಚಂದ್ರ ಅನ್ಕೊಂಡು ಮಾತಾಡುತ್ತಿದ್ದಾರೆ. ನೀವು ನಿಮ್ಮ ಜೀವನದಲ್ಲಿ ಅನೈತಿಕ ಸಂಬಂಧ ಇಟ್ಟುಕೊಂಡಿಲ್ವಾ ಎಂದು ಪ್ರಶ್ನಿಸಿದರು.
ಇನ್ನ ಮಾನ್ಯ ಸಿದ್ದರಾಮಯ್ಯ, ಕುಮಾರಸ್ವಾಮಿ, ಮುನಿಯಪ್ಪ, ಡಿ.ಕೆ.ಶಿವಕುಮಾರ್ ಮತ್ತು ನನ್ನನ್ನು ಸೇರಿದಂತೆ ಎಲ್ಲ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆ ಆಗಲಿ.
ಯಾರಿಗೆ ಅನೈತಿಕ ಸಂಬಂಧ ಇದೆ, ವಿವಾಹವೇತರ ಸಂಬಂಧ ಇದೆ ಎಂಬುವುದು ಗೊತ್ತಾಗಲಿ. ಸಿಎಂ ಆಗಿದ್ದಾಗ ಯಾರು ಏನು ಮಾಡಿದ್ರು ಅನ್ನೋದು ಗೊತ್ತಾಗಲಿ.
ಸಿದ್ದರಾಮಯ್ಯ, ಕುಮಾರಸ್ವಾಮಿ, ಮುನಿಯಪ್ಪ, ಡಿ.ಕೆ.ಶಿವಕುಮಾರ್ ಏನು ಏಕಪತ್ನಿವ್ರತಸ್ಥರಾ ಎಂದು ಪ್ರಶ್ನಿಸಿದ ಸುಧಾಕರ್, ನೈತಿಕತೆ ಬಗ್ಗೆ ಮಾತನಾಡೋರು ಮಾದರಿ ಆಗಿದ್ದರೆ ತನಿಖೆಗೆ ಎಲ್ಲರೂ ಒಪ್ಪಿಕೊಳ್ಳಲಿ ಎಂದು ಸವಾಲು ಎಸೆದರು.










