ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆ ರಾಜ್ಯದ ಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ರಾಜ್ಯದ ಎಲ್ಲ ಪಡಿತರ ಚೀಟಿದಾರರಿಗೆ ಏಪ್ರಿಲ್ ನಿಂದ ಜೂನ್ ತಿಂಗಳ ವರೆಗೆ ಅಕ್ಕಿ ವಿತರಣೆ ಮಾಡುವಂತೆ ರಾಜ್ಯ ಸರ್ಕಾರವು ಮಹತ್ವದ ಘೋಷಣೆ ಮಾಡಿದೆ.
ಅಲ್ಲದೆ ಪಡಿತರ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಏಪ್ರಿಲ್ ನಿಂದ ಜೂನ್ ವರೆಗೆ ಪಡಿತರ ವಿತರಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಜೊತೆಗೆ ಬಿಪಿಎಲ್ ಕಾರ್ಡ್ ದಾರರರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿಯಂತೆ ಮೂರು ತಿಂಗಳು 10 ಕೆಜಿ ಅಕ್ಕಿ ವಿತರಿಸಬೇಕು. ಇನ್ನು ಎಪಿಎಲ್ ಕಾರ್ಡ್ ದಾರರಿಗೆ ಪ್ರತಿ ಕೆ.ಜಿ ಅಕ್ಕಿಗೆ 15 ರೂಪಾಯಿಯಂತೆ 10 ಕೆಜಿ ಅಕ್ಕಿ ನೀಡುವಂತೆ ಸರ್ಕಾರ ತನ್ನ ಅಧಿಕೃತ ಆದೇಶದಲ್ಲಿ ಸ್ಪಷ್ಟಪಡಿಸಿದೆ.








