1 ವರ್ಷದಿಂದ ಮಗಳ ಮೇಲೆ ನಿರಂತರ ಅತ್ಯಾಚಾರ – ತಂದೆ ಅರೆಸ್ಟ್..!
42 ವರ್ಷದ ಕಾಮುಕ 14 ವರ್ಷದ ತನ್ನ ಮಗಳ ಮೇಲೆ 1 ವರ್ಷಕ್ಕಿಂತಲೂ ಅಧಿಕ ಸಮಯದಿಂದ ನಿರಂತರ ಅತ್ಯಾಚಾರವೆಸಗಿರೋದಾಗಿ ಸಂತ್ರಸ್ತೆಯ ತಾಯಿ ದೂರು ದಾಖಲಿಸಿದ್ದಾರೆ.
ದೂರು ದಾಖಲಿಸಿಕೊಂಡು ತನಿಖೆ ನಡೆಸಿರುವ ಪೊಲೀಸರು ಸಂತ್ರಸ್ತೆಯ ಹೇಳಿಕೆ ಪಡೆದು ಆರೋಪಿಯನ್ನ ಬಂಧಿಸಿದ್ಧಾರೆ. ಕ್ಯಾಬ್ ಡ್ರೈವರ್ ಕೆಲಸ ಮಾಡುತ್ತಿದ್ದ ಆರೋಪಿಯು ಮಗಳು ಒಂಟಿಯಾಗಿ ಸಿಕ್ಕಾಗಲೆಲ್ಲಾ ಆಕೆಯ ಮೇಲೆ ಅತ್ಯಾಚಾರವೆಸಗುತ್ತಿದ್ದ ಎಂದು ಆರೋಪಿಸಲಾಗಿದೆ.
ಇನ್ನೂ ಸಂತ್ರಸ್ತೆ ತಾಯಿ ಕೆಲಸ ಮುಗಿಸಿ ತಡವಾಗಿ ಮನೆಗೆ ಬಂದಾಗ ಮಗಳು ಅಳುತ್ತಾ ಕುಳಿತಿದ್ದನ್ನ ಗಮನಿಸಿ ಈ ಬಗ್ಗೆ ಕೇಳಿದಾಗ ಸಂತ್ರಸ್ತೆಯು ಎಲ್ಲವನ್ನೂ ಹೇಳಿಕೊಂಡಿದ್ದಾಳೆ. ಬಳಿಕ ಸಂತ್ರಸ್ತೆಯ ತಾಯಿ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೊಪಿಯನ್ನ ಅರೆಸ್ಟ್ ಮಾಡಲಾಗಿದೆ.