ರಾಯಚೂರು : ಟಿಪ್ಪರ್ ಮತ್ತು ಬೈಕ್ ಡಿಕ್ಕಿ Raichur , ವ್ಯಕ್ತಿ ಸಾವು
ರಾಯಚೂರು : ಟಿಪ್ಪರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರಿನ ಸರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ. ಕರಿವೀರಯ್ಯ ಮೃತ ದುರ್ದೈವಿಯಾಗಿದ್ದಾರೆ.
ಈ ಅಪಘಾತದಿಂದ ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೆ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.









