ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಪತ್ನಿಗೆ ಕೊರೊನಾ ಪಾಸಿಟಿವ್..!
ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ನ ವರಿಷ್ಠರಾದ ಹೆಚ್ ಡಿ ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ದೇವೇಗೌಡ ಅವರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಇನ್ನೂ ದೇಚವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇನ್ನೂ ದೇವೇಗೌಡ ಅವರ ಜೊತೆಗೆ ಅವರ ಪತ್ನಿ ಚನ್ನಮ್ಮ ಅವರಿಗೂ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.
ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಕರ್ನಾಟಕದಲ್ಲೂ ತನ್ನ ಆರ್ಭಟ ತೋರಿಸುತ್ತಿದೆ. ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಮಧ್ಯೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮ ಅವರಿಗೂ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದು ಬಂದಿದ್ದು ದೇವೇಗೌಡ ಅವರ ಬೆಂಬಲಿಗರನ್ನ ಆತಂಕಕ್ಕೆ ದೂಡಿದೆ.
ಮುಂಬೈ : ಕೊರೊನಾ ಸೋಂಕಿತ ವೃದ್ಧ ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣು..!