ನವದೆಹಲಿ: ದೇಶದಲ್ಲಿ ಕೊರೊನಾಸುರನ ಮರಣಮೃದಂಗ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ 35 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 9152ಕ್ಕೆ ಏರಿದೆ. ಈ ಪೈಕಿ 7987 ಸಕ್ರಿಯ ಪ್ರಕರಣಗಳಿದ್ದರೆ, 856 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ಈವರೆಗೆ ಒಟ್ಟು 308 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯ ಅವಧಿಯಲ್ಲಿ ದೇಶದಲ್ಲಿ 35 ಮಂದಿ ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.








