`ಈಶ್ವರಪ್ಪ ಅವ್ರನ್ನ ಉಚ್ಛಾಟಿಸಲಿ, ಅಥವಾ ಸಿಎಂ ರಾಜೀನಾಮೆ ನೀಡಲಿ’
ಮಂಗಳೂರು : ಮುಖ್ಯಮಂತ್ರಿಗಳ ಕಾರ್ಯವೈಖರಿ ವಿರುದ್ಧ ಪತ್ರ ಬರೆದ ಕೆ.ಎಸ್.ಈಶ್ವರಪ್ಪನವರನ್ನ ಸಿಎಂ ಬಿಎಸ್ ಯಡಿಯೂರಪ್ಪ ಸಾಯಂಕಾಲದ ಒಳಗೆ ಸಚಿವ ಸ್ಥಾನದಿಂದ ಉಚ್ಛಾಟಿಸಲಿ ಅಥವಾ ತಾವೇ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಈಶ್ವರಪ್ಪ ಅವರು ಮುಖ್ಯಮಂತ್ರಿಗಳ ವಿರುದ್ಧ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಈಶ್ವರಪ್ಪನವರನ್ನು ಯಡಿಯೂರಪ್ಪ ಇಂದು ಸಾಯಂಕಾಲದ ಒಳಗೆ ಸಚಿವ ಸ್ಥಾನದಿಂದ ಉಚ್ಛಾಟಿಸಲಿ ಅಥವಾ ತಾವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ.
ಈಶ್ವರಪ್ಪ ಬರೆದಿರುವುದು ಕೇವಲ ಪತ್ರ ಅಲ್ಲ, ರಾಜ್ಯ ಸರಕಾರದ ಆಡಳಿತ ವೈಖರಿ ಬಗ್ಗೆ. ಹಿರಿಯ ಕ್ಯಾಬಿನೆಟ್ ಮಿನಿಸ್ಟರ್ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಬಿಂಬಿಸಿದ್ದಾರೆ.
ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಸಚಿವರಿಗೆ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇಲ್ಲದಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಡಿಕೆಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಪತ್ರ ಬರೆದಿರೋದನ್ನ ಈಶ್ವರಪ್ಪ ಇದನ್ನ ರೆಬೆಲ್ ಅಲ್ಲ. ಲಾಯಲ್ಟಿ ಅಂತಿದ್ದಾರೆ. ಇದು ರಾಜ್ಯದ ಆಡಳಿತದ ವಿಚಾರ. ಆಡಳಿತದ ಬಗ್ಗೆ ದೇಶಕ್ಕೆ ಪಾಠ ಹೇಳ್ತಾ ಇದ್ದವರು ಇದನ್ನು ತೋರಿಸಿಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಇದೇ ವೇಳೆ ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಇಲ್ಲ ಎಂಬ ಕಟೀಲ್ ಮಾತಿಗೆ ಪಂಚ್ ಕೊಟ್ಟ ಟ್ರಬಲ್ ಶೂಟರ್, ಸಿದ್ದರಾಮಯ್ಯ ಮತ್ತು ನನ್ನ ನಡುವೆ ಭಿನ್ನಮತವಿರುವ ಬಗ್ಗೆ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ.
ಆದರೆ ನಾನು ಮಂತ್ರಿಯಾಗಿದ್ದಾಗ ಸಿಎಂ ವಿರುದ್ಧ ಮಾತಾಡಿಲ್ಲ ಮೊದಲು ನಿಮ್ದು ಸರಿಮಾಡಿಕೊಳ್ಳಿ ನಿಮ್ಮಲ್ಲಿ 6 ಜನ ಮುತ್ತು ರತ್ನಗಳನ್ನು ಇಟ್ಟುಕೊಂಡಿ ಕೊಂಡಿದ್ದಿರಿ. ಇನ್ನು 15 ಜನ ಬೇರೆ ಇದ್ದಾರೆ ಎಂದು ಮಾರ್ಮಿಕ ನುಡಿದರು.










