ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಕೀಚನಿಗೆ ಮರಣದಂಡನೆ ವಿಧಿಸಿದ ಕೋರ್ಟ್..!
ಉತ್ತರಪ್ರದೇಶ : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನಿಗೆ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. 30 ನೀರಜ್ ಎಂಬ ಕೀಚನಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ.
ಉತ್ತರಪ್ರದೇಶದ ಫಿರೋಜ್ ಬಾದ್ ನಲ್ಲಿ ಈ ಕಾಮುಕ ಸೆಪ್ಟೆಂಬರ್ 10ರಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಸಂಬಂಧ ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಇದೀಗ ಕೋರ್ಟ್ ನಲ್ಲಿ ನ್ಯಾಯಾಧೀಶರು ಈತನನ್ನ ಅಪರಾಧಿ ಎಂದು ಘೋಷಿಸಿ ಶಿಕ್ಷೆ ವಿಧಿಸಸಿದ್ದಾರೆ.
ಪ್ರಕರಣ ಹಿನ್ನೆಲೆ
ಬಾಲಕಿಯನ್ನ ಆರೋಪಿ ಆಕೆಯ ತಂದೆಯ ಅನುಮತಿ ಪಡೆದು ಮನೆಗೆ ಕರೆದೊಯ್ದು ಪ್ರಸಾದ ನೀಡುವುದಾಗಿ ಕರೆದೊಯ್ದಿದ್ದ. ಆದ್ರೆ ಮನೆಯ ಬದಲಿಗೆ ಬೇರೆ ಯಾವುದೋ ನಿರ್ಜನ ಪ್ರದೇಶಕ್ಕೆ ಬಾಲಕಿಯನ್ನ ಎಳೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದ.
ಬಳಿಕ ಈ ವಿಚಾರ ಯಾರಲ್ಲಿಯೂ ಹೇಳದಂತೆ ಬಾಲಕಿಗೆ ಜೀವಬೆದರಿಕೆಯನ್ನೂ ಹಾಕಿದ್ದ. ಆದ್ರೆ ಬಾಲಕಿ ಈ ವಿಚಾರವನ್ನ ಪೋಷಕರಿಗೆ ತಿಳಿಸಿದ್ದಾಲೆ. ನಂತರ ಈ ಸಂಬಂಧ ಪೊಲೀಸ್ ಟಾಣೆಯಲ್ಲಿ ದೂರು ದಾಖಲಾಗಿತ್ತು.
ಹುಕ್ಕೇರಿ : ಬಸ್ಸಿನಿಂದ ಜಿಗಿದು ಮಾಜಿ ಸೈನಿಕ ಆತ್ಮಹತ್ಯೆ