ಬಾಲಿವುಡ್ ನ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಗೂ ಕೊರೊನಾ ಪಾಸಿಟಿವ್..!
ಮುಂಬೈ: ಬಾಲಿವುಡ್ ನ ಸ್ಟಾರ್ ನಟ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಈ ಬಗ್ಗೆ ಖುದ್ದು ಅಕ್ಷಯ್ ಕುಮಾರ್ ಅವರೇ ತಮ್ಮ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿದ್ದಾರೆ.
ಇಂದು ಬೆಳಿಗ್ಗೆ ನನಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ನಾನು ಐಸಲೋಶನ್ ಗೆ ಒಳಗಾಗಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ನಲ್ಲಿದ್ದು, ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕೂಡಲೇ ಕೋವಿಡ್ ಪರೀಕ್ಷ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.








