ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ವಿ ರಾಜಶೇಖರನ್ ಅವರ ನಿಧನ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ. ಅವರು ನಿಷ್ಠಾವಂತ ಕಾಂಗ್ರೆಸ್ ನಾಯಕರಾಗಿದ್ದರು. ತಮ್ಮ ಕೊನೆ ಉಸಿರಿರುವವರೆಗೂ ಸಾಮಾಜಿಕ ಹೋರಾಟಗಾರರೂ ಆಗಿದ್ದರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ ಹೇಳಿದ್ದಾರೆ. ಸಂತಾಪ ವ್ಯಕ್ತಪಡಿಸಿದ ಅವರು, ರಾಜಶೇಖರನ್ ಅವರು ಯುಪಿಎ ಸರ್ಕಾರದಲ್ಲಿ ಯೋಜನಾ ಸಚಿವಾಲಯದ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ತಮ್ಮ ಸರಳತೆ ಹಾಗೂ ಜನರ ಏಳಿಗೆಗೆ ಅವರು ಹೊಂದಿದ್ದ ಬದ್ಧತೆಯಿಂದ ಹೆಚ್ಚು ಹೆಸರು ಮಾಡಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷ ಹಾಗೂ ದೇಶಕ್ಕೆ ದೊಡ್ಡ ನಷ್ಟ. ಜನರಿಗೆ ಅವರು ಮಾಡಿರುವ ಸೇವೆ ಹಾಗೂ ಪಕ್ಷ ಬಲವರ್ಧನೆಗೆ ಅವರ ಕೊಡುಗೆ ಸದಾ ನೆನಪಿನಲ್ಲಿ ಉಳಿಯಲಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ ಸದಸ್ಯರಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ವೇಣುಗೋಪಾಲ ಹೇಳಿದರು
ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್
ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...








