ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದ 21 ದಿನಗಳ ಲಾಕ್ ಡೌನ್ ಅವಧಿ ಇಂದಿಗೆ ಮುಕ್ತಾಯವಾಗಿದೆ. ಈ ನಡುವೆ ಇಂದು ಪ್ರಧಾನಿ ಮೋದಿಯವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದು, ಭಾರತದಾದ್ಯಂತ ಎರಡನೇ ಹಂತದ ಲಾಕ್ಡೌನ್ ಅನ್ನು ಮೇ 3ರ ತನಕ ವಿಸ್ತರಣೆ ಮಾಡಲಾಗುವುದು ಅಂಥ ಘೋಷಣೆ ಮಾಡಿದರು. ಇನ್ನು ಕೇಂದ್ರ ಸರ್ಕಾರಕ್ಕೂ ಮುನ್ನ ಒಡಿಶಾ, ಪಂಜಾಬ್, ಪಶ್ಚಿಮ ಬಂಗಾಳ, ತೆಲಂಗಾಣ, ಕರ್ನಾಟಕ ಲಾಕ್ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಕೊರೊನಾ ನಿಯಂತ್ರಣ ಮಾಡುವುದಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿಯವರು ಇದು ಸೇರಿ ಮೂರನೇ ಬಾರಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ದೇಶವನ್ನು ರಕ್ಷಿಸಲು ಭಾರತದ ಜನರು ದಿನಗಳಿಂದ ಯಾವ ರೀತಿಯ ತೊಂದರೆಗಳನ್ನು ಸಹಿಸಿಕೊಳ್ಳುತ್ತಿದ್ದಾರೆಂದು ನನಗೆ ತಿಳಿದಿದೆ. ನೀವು ಆಹಾರ, ಕೆಲಸದ ತೊಂದರೆಗಳನ್ನು ಎದುರಿಸಿದ್ದೀರಿ, ಆದರೆ ನೀವು ಇನ್ನೂ ಹೋರಾಡಲು ನಿರ್ಧರಿಸಿದ್ದೀರಿ ಅಂತ ಹೇಳಿದರು. ಇದೇ ವೇಳೆ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿವಸವಾದ ಇಂದು ಪ್ರಧಾನಿ ಮೋದಿ ಅವರು ಶುಭಾಶಯ ಕೋರಿದರು. ವಿದೇಶದಿಂದ ಬಂದವರನ್ನು ಸ್ಕ್ರೀನಿಂಗ್ ಮಾಡಿದ್ದೇವೆ. ನಿಮ್ಮ ನಿಮ್ಮ ಪರಿವಾರದ ಆರೋಗ್ಯಕ್ಕಾಗಿ ನಾನು ಪ್ರಾರ್ಥನೆ ಮಾಡುವೆ. ವಿದೇಶಗಳಿಗೆ ಹೋಲಿಕೆ ಮಾಡಿದ್ರೆ ಕೋರಾನ ಹೋರಾಟದಲ್ಲಿ ನಾವು ಮುಂದೆ ಇದ್ದೇವೆ. ವಿದೇಶಗಳಲ್ಲೂ ಕೂಡ ಸಾವಿರಾರು ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಸಾಮಾಜಿಕ ಅಂತರ ಎನ್ನುವುದು ಬಹಳ ಪ್ರಮುಖ ಪ್ರಮುಖವಾದ ಅಂಶವಾಗಿದೆ. ಭಾರತದಲ್ಲಿ ಯಾವುದೇ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡುವ ಮೊದಲೇ ಸ್ಕ್ರೀನಿಂಗ್ ಪ್ರಾರಂಭವಾಯಿತು .ಭಾರತೀಯರ ಜೀವದ ಮುಂದೆ ಆರ್ಥಿಕತೆ ದೊಡ್ಡದಲ್ಲ ಎಂದು ಹೇಳಿದರು.
ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆಯುವುದು ಸಾಮಾನ್ಯ. ಆದರೆ ಈಗ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಭಾವಿ ನಾಯಕರ ನಡುವೆ ಸರ್ಕಾರಿ ಬಂಗಲೆಗಾಗಿ ಜಂಗೀ ಕುಸ್ತಿ...








