ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ‘ಕೊರೊನಾ ಯೋಧರನ್ನು’ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ವಿಡಿಯೋ ಮೂಲಕ ಪ್ರಶಂಸಿಸಿದ್ದಾರೆ.
‘ಸುರಕ್ಷತಾ ಕವಚಗಳಲ್ಲಿದೆಯೂ ನಮ್ಮ ಕೊರೊನಾ ಯೋಧರು ಮುಂಚೂಣಿಯಲ್ಲಿ ನಿಂತು ಹೋರಾಡುತ್ತಿದ್ದಾರೆ. ವೈದ್ಯರು, ಆರೋಗ್ಯ ಸಿಬ್ಬಂದಿ ಹಾಗೂ ಸ್ವಯಂ ಸೇವಕರು ಸೋಂಕಿತರ ಸೇವೆ ಸಲ್ಲಿಸುತ್ತಿದ್ದಾರೆ.ಎಲ್ಲರೂ ಲಾಕ್‌ಡೌನ್ ಅನುಸರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಿ’ ಎಂದು ವಿನಂತಿಸಿಕೊಂಡಿದ್ದಾರೆ.
https://twitter.com/INCIndia/status/1249872501028552705?s=19
ಅಲ್ಲದೆ ‘ಲಾಕ್‌ಡೌನ್ ಯಶಸ್ವಿಗೊಳಿಸಲು ಪೊಲೀಸರು ಹಾಗೂ ಯೋಧರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಂಪನ್ಮೂಲಗಳ ಕೊರತೆ ನಡುವೆಯೂ ಪೌರಕಾರ್ಮಿಕರು ಸೋಂಕು ವ್ಯಾಪಿಸುವುದನ್ನು ತಡೆಯಲು ಸ್ವಚ್ಛತಾ ಕಾರ್ಯಗಳನ್ನು ಮುಂದುವರಿಸಿದ್ದಾರೆ. ಸರ್ಕಾರಿ ಅಧಿಕಾರಿಗಳು ಅಗತ್ಯ ಸೇವೆಗಳ ಪೂರೈಕೆಗಾಗಿ ನಿರಂತರ ಶ್ರಮಿಸುತ್ತಿದ್ದಾರೆ. ನಾವು ಅವರಿಗೆ ಸಹಕಾರ ನೀಡದಿದ್ದರೆ, ಅವರು ತಮ್ಮ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ವೈದ್ಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು ವರದಿಯಾಗುತ್ತಿವೆ. ಇದು ನಮ್ಮ ಸಂಸ್ಕೃತಿಗೆ ವಿರುದ್ಧದವಾದುದು, ಇದು ತಪ್ಪು. ಈ ಹೋರಾಟದಲ್ಲಿ ನಾವೆಲ್ಲರೂ ಅವರಿಗೆ ಬೆಂಬಲ ನೀಡಬೇಕು’ ಎಂದು ಐದು ನಿಮಿಷಗಳ ವಿಡಿಯೋದಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಸೋನಿಯಾ ಗಾಂಧಿ ಅವರು ಅಭಿನಂದಿಸಿದ್ದಾರೆ.








