ನವದೆಹಲಿ: ದೇಶದಲ್ಲಿ ಲಾಕ್ ಡೌನ್ ಹೊರತಾಗಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಗಣನೀಯ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದ್ದು ಇದೀಗ ದೇಶಾದ್ಯಂತ ಸೋಂಕಿತ ಸಂಖ್ಯೆ 10 ಸಾವಿರ ಗಡಿ ದಾಟಿದೆ. ದೇಶದಲ್ಲಿ ಒಟ್ಟು 10, 363 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಈ ಕೇಸ್ ಗಳ ಪೈಕಿ 8,988 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ 1035 ಮಂದಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 339 ಮಂದಿ ಮೃತಪಟ್ಟಿದ್ದಾರೆ.
ಈ ನಡುವೆ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮೇ 3ರ ತನಕ ಲಾಕ್ ಡೌನ್ ಅನ್ನು ವಿಸ್ತರಿಸಿದ್ದಾರೆ.
ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆಯುವುದು ಸಾಮಾನ್ಯ. ಆದರೆ ಈಗ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಭಾವಿ ನಾಯಕರ ನಡುವೆ ಸರ್ಕಾರಿ ಬಂಗಲೆಗಾಗಿ ಜಂಗೀ ಕುಸ್ತಿ...








