ರಾಜ್ಯದಲ್ಲಿ ಒಂದು ವಾರದ ಬಳಿ ಲಾಕ್ ಡೌನ್ ಪಕ್ಕಾ..?
ಬಸವಕಲ್ಯಾಣ : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಎರಡನೇ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ನಿನ್ನೆ ರಾಜ್ಯದಲ್ಲಿ 10 ಸಾವಿರ ಕೇಸ್ ಗಳು ಪತ್ತೆಯಾಗಿರುವುದು ಆತಂಕದ ವಿಷಯವಾಗಿದೆ. ಆದರೂ ಸರ್ಕಾರ ಎಲೆಕ್ಷನ್ ಬ್ಯುಸಿಯಲ್ಲಿದೆ.
ಈ ಮಧ್ಯೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಅನಿವಾರ್ಯ ಎಂಬ ಮಾತುಗಳು ಕೇಳಿಬರುತ್ತಿವೆ.
ಅದರಲ್ಲೂ ಬೆಂಗಳೂರಿನಲ್ಲಿ ಕನಿಷ್ಟ 10 ದಿನಗಳ ಲಾಕ್ ಡೌನ್ ಅವಶ್ಯಕ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಈ ಮಧ್ಯೆ ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದಿನ ದಿನಗಳಲ್ಲಿ ಲಾಕ್ ಡೌನ್ ನಂತಹ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರೋದು ನಿಜ.
ಇದೇ ಕಾರಣಕ್ಕೆ ನಾವು ಕೆಲ ನಗರದಲ್ಲಿ ನೈಟ್ ಕಫ್ರ್ಯೂ ಜಾರಿ ಮಾಡಿದ್ದೇವೆ. ಜನರು ಜವಾಬ್ದಾರಿಯಾಗಿ ನಡೆದುಕೊಳ್ಳಬೇಕು.
ಒಂದು ವಾರ ಕಾದುನೋಡುತ್ತೇವೆ. ಅದಾದ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.










