ಸಿಡಿ ಪ್ರಕರಣಕ್ಕೆ ಟ್ವಿಸ್ಟ್ : ಉಲ್ಟಾ ಹೊಡೆದ ಸಿಡಿ ಲೇಡಿ Ramesh jarakiholi
ಬೆಂಗಳೂರು : ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಸಿಡಿಯಲ್ಲಿದ್ದಾರೆ ಎನ್ನಲಾದ ಯುವತಿ ಎಸ್ ಐಟಿ ಅಧಿಕಾರಿಗಳ ಮುಂದೆ ಯುವತಿ ಉಲ್ಟಾ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ.
ಇವತ್ತು ಏಕಾಏಕಿ ಎಸ್ ಐಟಿ ಅಧಿಕಾರಿಗಳ ಮುಂದೆ ಹಾಜರಾದ ಯುವತಿ, ನನ್ನನ್ನು ಹನಿ ಟ್ರ್ಯಾಪ್ ಗೆ ಸಿಲುಕಿಸಿ ಈ ರೀತಿ ಕೃತ್ಯ ಎಸಲಾಗಿದೆ.
ಕಿಂಗ್ ಪಿನ್ ಗಳಾದ ಮಾಜಿ ಪತ್ರಕರ್ತ ನರೇಶ್ ಹಾಗೂ ಶ್ರವಣ್ ಹನಿಟ್ರ್ಯಾಪ್ ಗೆ ನನ್ನನ್ನು ಬಳಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾಳೆ.
ಅಲ್ಲದೆ ಒತ್ತಡದಲ್ಲಿ ಅಂದು ಹೇಳಿಕೆ ನೀಡಿದ್ದೆ ಎಂದು ಹೇಳಿದ್ದಾರೆ.
ಇನ್ನು ಎಸ್‍ಐಟಿ ಅಧಿಕಾರಿಗಳು ಮತ್ತೊಮ್ಮೆ ಯುವತಿಯನ್ನು ಜಡ್ಜ್ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಅನುಮತಿ ಕೋರಿದ್ದಾರೆ ಎಂದು ತಿಳಿದುಬಂದಿದೆ.










