ರಾಹುಲ್ ಬೆಳಗಾವಿಗೆ ಬರಲಿ, ಸಿಂಹವೋ, ಕುರಿಯೋ ಗೊತ್ತಾಗುತ್ತೆ : ಈಶ್ವರಪ್ಪ
ಬೆಳಗಾವಿ : ರಾಹುಲ್ ಗಾಂಧಿ ಬೆಳಗಾವಿಗೆ ಪ್ರಚಾರಕ್ಕೆ ಬರಲಿ, ಆಗ ಅವರು ಸಿಂಹವೋ, ನರಿವೋ, ಕುರಿಯೋ ಗೊತ್ತಾಗುತ್ತೆ ಅಂತ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಗಿದ್ದಾರೆ.
ಉಪಚುನಾವಣೆ ಫಲಿತಾಂಶ ಬಳಿಕ ಬಿಜೆಪಿ ಸರ್ಕಾರ ಕುಸಿಯುತ್ತದೆ ಎಂಬ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿಕೆಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಈಶ್ವರಪ್ಪ, ರಣದೀಪ್ ಸಿಂಗ್ ಸುರ್ಜೇವಾಲಗೆ ಕರ್ನಾಟಕನೇ ಮರೆತು ಹೋಗಿದೆ.
ಸುರ್ಜೇವಾಲನಂತಹ ಭಟ್ಟಂಗಿಗಳು ರಾಹುಲ್ ಗಾಂಧಿಯನ್ನು ಹೊಗಳಿ ಹಾಳು ಮಾಡಿದ್ರು. ರಾಹುಲ್ ಕಾಲಿಟ್ಟ ಎಲ್ಲಾ ಕಡೆ ಕಾಂಗ್ರೆಸ್ ಸೋತಿದೆ. ಅವರನ್ನು ಬೆಳಗಾವಿ ಉಪಚುನಾವಣೆಗೆ ಕರೆಯಿಸಲಿ ಎಂದು ಸವಾಲು ಹಾಕಿದರು.
ಇನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ, ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಐದು ವರ್ಷ ಸಿಎಂ ಆದರೂ ಸಿದ್ದರಾಮಯ್ಯಗೆ ಏನೂ ಕೆಲಸ ಮಾಡಲಾಗಲಿಲ್ಲ. ಸಿದ್ದರಾಮಯ್ಯ ತಮ್ಮ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ರಿಜೆಕ್ಟ್ ಆದ್ರು.
ಜೈಲಿನಿಂದ ಹೊರಬಂದು ಬೇಲ್ನಲ್ಲಿರೋ ಡಿಕೆಶಿ ಇಂದು ಭ್ರಷ್ಟಾಚಾರದ ಬಗ್ಗೆ ಮಾತನಾಡ್ತಾರೆ. ತಮ್ಮ ಕ್ಷೇತ್ರದಿಂದ ತಿರಸ್ಕಾರಗೊಂಡ ಸಿದ್ದರಾಮಯ್ಯ, ಅಭಿವೃದ್ಧಿ ಬಗ್ಗೆ ಮಾತಾಡ್ತಾರೆ. ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಬೇಡ ಅಂತಾ ಜನ ತೀರ್ಮಾನಿಸಿದ್ದಾರೆ ಎಂದು ಹೇಳಿದರು.










