ಬೆಂಗಳೂರು : ರಾಜ್ಯದಲ್ಲಿ ಕೊರೊನಾಸುರ ತನ್ನ ಕಬಂದಬಾಹುಗಳನ್ನು ಕ್ಷಿಪ್ರಗತಿಯಲ್ಲಿ ಚಾಚುತ್ತಿದ್ದಾನೆ. ಅದರಂತೆ ಇಂದು ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, 11 ಜನರಿಗೆ ಸೋಂಕು ತಗುಲಿದೆ. ಈ ಮೂಲಕ, ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 11 ಜನರಿಗೆ ಕೊರೊನಾ ವೈರಸ್ ಸೋಂಕಿರುವುದಾಗಿ ತಿಳಿಸಿದೆ.
ಬಾಗಲಕೋಟಿಯಲ್ಲಿ ಮೂವರಿಗೆ, ಚಿಕ್ಕಬಳ್ಳಾಪುರದಲ್ಲಿ ಒಬ್ಬರಿಗೆ, ಬೆಂಗಳೂರು ನಗರದಲ್ಲಿ ಇಬ್ಬರಿಗೆ, ಕಲಬುರ್ಗಿಯಲ್ಲಿ ಮೂವರಿಗೆ, ವಿಜಯಪುರದಲ್ಲಿ ಒಬ್ಬರಿಗೆ ಮತ್ತು ಬೆಳಗಾವಿಯಲ್ಲಿ ಒಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ
ಇನ್ನೂ ಕೊರೊನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಈವೆರೆಗೆ 9 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ ಕೊರೊನಾ ವೈರಸ್ ಸೋಂಕಿತರಾಗಿದ್ದಂತ 65 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.








