ಬೆಳಗಾವಿ : ಸಿಎಂ ಬಿಎಸ್ ವೈ ಗೆ ಸುಸ್ತು ಜ್ವರ – ಹೋಟೆಲ್ ನಲ್ಲಿ ವಿಶ್ರಾಂತಿ..!
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರ ಮತಯಾಚನೆಗೆ ಜಿಲ್ಲೆಗೆ ಆಗಮಿಸಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಜ್ವರ, ಸುಸ್ತು ಕಂಡುಬಂದ ಹಿನ್ನೆಲೆಯಲ್ಲಿ ಅವರು ಹೋಟೆಲ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ನಿನ್ನೆ ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಳಗಾವಿಗೆ ಆಗಮಿಸಿ ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರ ಮತಯಾಚನೆ ಮಾಡಿದ್ದರು. ನಂತರ ಸಾಯಂಕಾಲ ಇದ್ದಕ್ಕಿದ್ದಂತೆ ಜ್ವರ, ಸುಸ್ತು ಕಂಡುಬಂತು. ತಾವು ಉಳಿದುಕೊಂಡಿದ್ದ ಹೊಟೇಲ್ ಗೆ ಬಂದರು. ಆಗ ಕೆಎಲ್ ಇ ಆಸ್ಪತ್ರೆಯ ವೈದ್ಯರು ಬಂದು ಆರೋಗ್ಯ ತಪಾಸಣೆ ಮಾಡಿದ್ದಾರೆ.
ವೈದ್ಯರು ಸಿಎಂ ಯಡಿಯೂರಪ್ಪನವರ ಆರೋಗ್ಯ ತಪಾಸಣೆ ಮಾಡಿ ಔಷಧಿಯನ್ನು ನೀಡಿದ್ದು ಸದ್ಯ ಸಿಎಂ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಕೂಡ ಸಿಎಂ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಸದ್ಯ ಮುಖ್ಯಮಂತ್ರಿಗಳು ವಾಸ್ತವ್ಯ ಹೂಡಿರುವ ಆಸ್ಪತ್ರೆ ಸುತ್ತ ಸ್ಯಾನಿಟೈಸ್ ಮಾಡಲಾಗಿತ್ತು ಮುಂಜಾಗ್ರತೆ ವಹಿಸಲಾಗುತ್ತಿದೆ.
ವಿಶ್ವದ ಶ್ರೀಮಂತರಲ್ಲಿ ಒಬ್ಬರಾದ TIKTOK – ಸಂಸ್ಥಾಪಕ..!