ಬೆಂಗಳೂರು : ಇಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 129 ನೇ ಜನ್ಮ ದಿನಾಚಣೆಯ ಅಂಗವಾಗಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ವಿಧಾನಸೌಧದ ಎದುರಿಗೆ ಇರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟ ಯುವಜನಾಂಗಕ್ಕೆ ಸ್ಪೂರ್ತಿಯಾಗಬೇಕು. ಯುವಜನತೆಯು ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಹಾಗೂ ಚಿಂತನೆಗಳನ್ನು ಅನುಸರಿಸಬೇಕು ಕರೆ ನೀಡಿದರು.
ಅಲ್ಲದೆ ಡಾ. ಬಿ.ಆರ್. ಅಂಬೇಡ್ಕರ್ ಅವರದ್ದು ಬಹುಮುಖಿ ಸಾಮರ್ಥ್ಯದ ಅಸಾಧಾರಣ ವ್ಯಕ್ತಿತ್ವ. ಶ್ರೇಷ್ಠ ಆರ್ಥಿಕ ತಜ್ಞ. ಸಾಮಾಜಿಕ ಪರಿವರ್ತನೆಯ ಹರಿಕಾರ, ಸಮಾನತೆಯ ಹರಿಕಾರ. ತಳಸಮುದಾಯಗಳ ವಿಮೋಚಕಾಗಿದ್ದಾರೆ. ಭಾರತ ಸಂವಿಧಾನದ ಉದಾರವಾದಿ. ಪ್ರಜಾಪ್ರಭುತ್ವ ವ್ಯವಸ್ಥೆಯ ಆಧಾರದ ಚಿಂತಕರಲ್ಲಿ ಪ್ರಮುಖ ಹೆಸರು ಇವದ್ದಾಗಿದೆ ಎಂದು ಅಂಬೇಡ್ಕರ್ ಅವರನ್ನು ಸ್ಮರಿಸಿದರು. ಅನ್ಯಾಯ, ಅಸಮಾನತೆ ಮತ್ತು ಶೋಷಣೆಯ ವಿರುದ್ಧ ಎಲ್ಲಾ ಚಳುವಳಿಗಳಿಗೆ ಇಂದಿಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳೇ ಬಳುವಳಿಯಾಗಿವೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಇನ್ನಷ್ಟು ಅಧ್ಯಯನವಾಗಬೇಕು. ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಹೊತ್ತು ಭಾರತ ಸಂವಿಧಾನವನ್ನು ಇತರ ದೇಶಗಳು ಅನುಸರಿಸುತ್ತಿವೆ ಹಾಗೂ ಅನುಕರಿಸುತ್ತಿವೆ. ತಮ್ಮ ನೇತೃತ್ವದ ರಾಜ್ಯ ಸರ್ಕಾರ ಡಾ. ಬಿ.ಆರ್.ಅಂಬೇಡ್ಕರ್ ಅವರ ಆಶಯಗಳಿಗೆ ಬದ್ಧವಾಗಿದೆ. ಅವರ ತತ್ವ ಆದರ್ಶಗಳ ಹಾದಿಯಲ್ಲಿ ನಡೆಯುವ ದೃಡ ಸಂಕಲ್ಪ ಹೊಂದಿದೆ ಎಂದು ಬಿಎಸ್ ವೈ ತಿಳಿಸಿದರು.








