3 ಉಪಚುನಾವಣೆಯಲ್ಲೂ ಬಿಜೆಪಿಯದ್ದೇ ಗೆಲುವು – ಬಿಎಸ್ ವೈ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆ, ಚುನಾವಣೆ ಗೆಲ್ಲಲ್ಲು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಗದೀಶ್ ಪ್ರಯತ್ನ ಮಾಡುತ್ತಿದ್ದಾರೆ. ದಿ. ಸುರೇಶ ಅಂಗಡಿ ಗೆದ್ದ ಅಂತರದಲ್ಲಿ ಮಂಗಲಾ ಅಂಗಡಿ ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪನವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು 3 ಉಪಚುನಾವಣೆಯಲ್ಲಿ ದೊಡ್ಡ ಅಂತರದಿಂದ ಗೆಲವು ಸಾಧಿಸಲಿದ್ದೇವೆ. ಸಿದ್ದರಾಮಯ್ಯ, ಡಿಕೆಶಿ ಹಗುರವಾಗಿ ಮಾತನಾಡುತ್ತಿದ್ದಾರೆ. ಇದಕ್ಕೆ ಚುನಾವಣೆ ಮೂಲಕ ಜನ ಉತ್ತರ ಕೊಡಲಿದ್ದಾರೆ ಎಂದಿದ್ದಾರೆ.








