ಡಿ.ಕೆ.ಶಿವಕುಮಾರ್ ತರ ನಾನು ಕೆಳಹಂತದ ರಾಜಕಾರಣ ಮಾಡಲು ಹೋಗುವುದಿಲ್ಲ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಡಿ.ಕೆ.ಶಿ.ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 129 ನೇ ಜನ್ಮ ಜಯಂತಿ ಪ್ರಯುಕ್ತ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ, ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಸುದ್ದಿಗಾರರು ತಮ್ಮರಾಜೀನಾಮೆಗೆ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಒತ್ತಾಯ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಖಡಕ್ ಆಗಿ ಸಚಿವರು ಪ್ರತಿಕ್ರಿಯೆ ನೀಡಿದರು. ಡಿ.ಕೆ.ಶಿವಕುಮಾರ್ ರವರ ಸದ್ಗುಣಗಳು ಮಾತ್ರ ಇದುವರೆಗೆ ಗೊತ್ತಿತ್ತು. ಆದರೆ ಅವರ ದೊಡ್ಡ ಗುಣ ಗೊತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ ಸುಧಾಕರ್, ಡಿ.ಕೆ.ಶಿವಕುಮಾರ್ ರೀತಿ ನಾನು ಕೆಳ ಹಂತದ ರಾಜಕಾರಣ ಮಾಡುವುದಕ್ಕೆ ಹೋಗುವುದಿಲ್ಲ ಎಂದರು.
ಇತ್ತೀಚೆಗೆ ಸಚಿವ ಸುಧಾಕರ್ ತನ್ನ ಮಕ್ಕಳೊಂದಿಗೆ ಈಜುಕೊಳದಲ್ಲಿ ಈಜುವ ಫೋಟೊವನ್ನು ಟ್ಟಿಟ್ಟರ್ ನಲ್ಲಿ ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕೋವಿಡ್-19 ಸಂಕಷ್ಟದ ಸಮಯದಲ್ಲಿ ಸುಧಾಕರ್ ವರ್ತನೆ ಸರಿಯಲ್ಲ, ಅವರು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಒತ್ತಾಯಿಸಿದ್ದರು.
ಕೃಷಿ ಸಚಿವ ಬಿ.ಸಿ.ಪಾಟೀಲ್, ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಪಂ ಸದಸ್ಯ ರಾಜಾಕಾಂತ್, ಡಿಸಿ ಆರ್.ಲತಾ, ಸಿಇಒ ಫೌಜಿಯಾ ತರುನ್ನುಮ್, ಎಸ್ಪಿ ಮಿಥುನ್ ಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆಯುವುದು ಸಾಮಾನ್ಯ. ಆದರೆ ಈಗ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಭಾವಿ ನಾಯಕರ ನಡುವೆ ಸರ್ಕಾರಿ ಬಂಗಲೆಗಾಗಿ ಜಂಗೀ ಕುಸ್ತಿ...








