ಎಸ್ ಎಸ್ ಎಲ್ ಸಿ ಪರೀಕ್ಷೆ ಬಗ್ಗೆ ಸುರೇಶ್ ಕುಮಾರ್ ಹೇಳಿದ್ದೇನು..? Suresh Kumar
ಚಾಮರಾಜನಗರ : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸೋ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದೆ. ಕೋರೊನಾ ಸೋಂಕು ಹೆಚ್ಚಾಗಿ ಹರಡತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲು ಮುಂದಾಗಬೇಕಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿಕೆ ನೀಡಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿಯಲ್ಲಿ ಚೆಸ್ಕಾಂ ನಿಂದ ವಿದ್ಯುತ್ ವಿತರಣಾ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾದ್ಯಮದವರೊಂದಿಗೆ ಮಾತನಾಡುತ್ತಾ, ಅಮೂಲ್ಯವಾದ ಜೀವದ ಬಗ್ಗೆ ಕಟ್ಟೆಚ್ಚರ ವಹಿಸಬೇಕಾಗಿದೆ, ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಮುಖ್ಯಮಂತ್ರಿ ಗಳು ಕರೆಸಿರುವ ಸರ್ವ ಪಕ್ಷಗಳ ಸಭೆಯಲ್ಲಿ ತೀರ್ಮಾನ ಕೈ ಗೊಳ್ಳಲಿದ್ದಾರೆ ಎಂದು ಹೇಳಿದರು.
ಮಹಾಮಾರಿ ಕೋರೊನಾ ಬಗ್ಗೆ ಯಾರೂ ರಾಜಕಾರಣ ಮಾಡಬಾರದು ಇದು ಮನುಷ್ಯ ಕುಲವನ್ನೇ ನಾಶ ಮಾಡಲು ಬಂದಿದೆ.ಇದನ್ನು ಸಂಪೂರ್ಣ ನಿಯಂತ್ರಣ ಮಾಡಲು ಎಲ್ಲರೂ ಸಹಕರಿಸಬೇಕು ಎಂದರು.










