ಕೊರೊನಾ ಹಾವಳಿ – JEE ಪರೀಕ್ಷೆ ಮುಂದೂಡಿಕೆ
ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಮಿತಿ ಮೀರಿ ಹೋಗಿರುವ ಕಾರಣ ಸರ್ಕಾರ ಅನೇಕ ಕಟ್ಟು ನಿಟ್ಟಿನ ಕ್ರಮಗಳನ್ನ ಕೈಗೊಳ್ತಿದೆ. ಈ ನಡುವೆ ಅನೇಕ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಿರುವ ಸರ್ಕಾರ ಇದೀಗ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.
ಜೆಇಇ ಮುಖ್ಯ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಮುಂದೂಡಿದ್ದು, 15 ದಿನಗಳ ಮೊದಲೇ ಮುಂದೂಡಿಕೆಯಾದ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಪರೀಕ್ಷೆ ಮುಂದೂಡಲು ತೀರ್ಮಾನ ಕೈಗೊಳ್ಳಲಾಗಿದೆ.








