ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ಮುಂದುವರಿಸಿರುವ ಕೇಂದ್ರ ಸರ್ಕಾರ, ಇನ್ನೂ ಏನೆಲ್ಲಾ ಕ್ರಮಗಳನ್ನ ಕೈಗೊಳ್ಳಬೇಕು ಎನ್ನುವ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ, ಅವರ ನಿವಾಸದಲ್ಲಿ ಸಚಿವ ಸಂಪುಟ ಸಭೆ ಆಯೋಜಿಸಲಾಗಿದೆ.
ಸಭೆಯಲ್ಲಿ ಲಾಕ್ ಡೌನ್ ಯಶಸ್ವಿಗೊಳಿಸಲು ಮತ್ತು ಕೊರೊನಾ ಸೋಂಕು ಹರಡದಂತೆ ತಡೆಗಟ್ಟೋಕೆ ಏನು ಕ್ರಮಗಳನ್ನ ಕೈಗೊಳ್ಳಬೇಕು. ಯಾವ ಹಂತಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಬೇಕು ಅನ್ನೋ ಬಗ್ಗೆ ಚರ್ಚೆ ನಡೆಯಲಿದೆ.








