ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕು ವೇಗ ಪಡೆದುಕೊಂಡಿದ್ದು, ಕಳೆದ 24 ಗಂಟೆಗಳಲ್ಲಿ 1 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,076 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,439ಕ್ಕೆ ಏರಿಕೆಯಾಗಿದೆ. ಇನ್ನು, ಇದೇ 24 ಗಂಟೆಗಳ ಅವಧಿಯಲ್ಲಿ ಕೊರೊನಾದಿಂದ 38 ಜನ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 377 ಏರಿಕೆಯಾಗಿದೆ.
ಸದ್ಯ 9756 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಇನ್ನು, 1,305 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.








