“ದೇಶದಲ್ಲಿ ಮತ್ತೊಮ್ಮೆ ಲಾಕ್ ಡೌನ್” ಬಗ್ಗೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ
ನವದೆಹಲಿ : ದೇಶದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರಿಸಿ ಬೊಬ್ಬರಿಯುತ್ತಿದ್ದು, ಮತ್ತೊಮ್ಮೆ ಲಾಕ್ ಡೌನ್ ಮಾಡುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ.
ಕಳೆದ 24 ಗಂಟೆಗಳಲ್ಲಿ 2 ಲಕ್ಷ 70 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ನಡೆಸಿದ್ದಾರೆ.
ಈ ಮಧ್ಯೆ ದೇಶದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸ್ಪಷ್ಟನೆ ನೀಡಿದ್ದಾರೆ. ದೇಶದಾದ್ಯಂತ ಮತ್ತೆ ಲಾಕ್ ಡೌನ್ ಮಾಡುವ ಯೋಜನೆ ಸರ್ಕಾರದ ಮುಂದಿಲ್ಲ.
ಲಾಕ್ ಡೌನ್ ಮಾಡುವ ಯಾವ ಯೋಜನೆಯೂ ನಮ್ಮ ಮುಂದಿಲ್ಲ, ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ಲಾಕ್ ಡೌನ್ ಹೊರತಾಗಿ ಕಂಟೈನ್ ಮೆಂಟ್ ಜೋನ್ ಅಥವಾ ವಲಯವನ್ನಾಗಿ ಪರಿವರ್ತಿಸಿ ಅಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಸೂಕ್ಷ್ಮ ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಅನಿಮೇಶ್ ಸಕ್ಸೇನಾ ಅವರೊಂದಿಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ದೇಶದಾದ್ಯಂತ ಮತ್ತೆ ಲಾಕ್ ಡೌನ್ ಹೇರುವ ಮಾತೇ ಇಲ್ಲ.
ಕೋವಿಡ್ ಸೋಂಕನ್ನು ನಿವಾರಿಸುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ.










