R. Ashok ನಮ್ಮಲ್ಲಿ ಪರಿಸ್ಥಿತಿ ಕೈಮೀರಿ ಹೋಗಿಲ್ಲ : ಆರ್.ಅಶೋಕ್ R. Ashok
ಬೆಂಗಳೂರು : ನಮ್ಮಲ್ಲಿ ಪರಿಸ್ಥಿತಿ ಕೈ ಮೀರಿ ಹೋಗಿಲ್ಲ. ಮಹಾರಾಷ್ಟ್ರ ಹಾಗೂ ದೆಹಲಿಯ ಪರಿಸ್ಥಿತಿ ನಮ್ಮಲ್ಲಿ ಇಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ತಡೆಗೆ ಲಾಕ್ ಡೌನ್ ಪರಿಹಾರವಲ್ಲ. ಕೋವಿಡ್ ತಡೆಗೆ ಜನರ ಸಹಕಾರ ಅಗತ್ಯ.
ಬೆಂಗಳೂರಿನಲ್ಲಿ ಕಠಿಣ ಕ್ರಮ ತಗೋತೀವಿ. ಪರಿಸ್ಥಿತಿ ಕೈಮೀರಿ ಹೋಗಿಲ್ಲ. ಮಹಾರಾಷ್ಟ್ರ, ದೆಹಲಿಯಂತ ಪರಿಸ್ಥಿತಿ ನಮ್ಮಲ್ಲಿ ಇಲ್ಲ.
ಇನ್ನೂ ನಮ್ಮಲ್ಲಿ ಕೋವಿಡ್ ತಡೆಗೆ ಕ್ರಮ ಕೈಗೊಳ್ಳಲು ಅವಕಾಶ ಇದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಇನ್ನೂ ಎರಡು ತಿಂಗಳು ಇದೇ ಪರಿಸ್ಥಿತಿ ಇರುತ್ತೆ. ಮುಂದಿನ ಎರಡು ತಿಂಗಳಿಗೆ ಕೈಗೊಳ್ಳುವ ಕ್ರಮಗಳ ಬಗ್ಗೆ ಇವತ್ತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.










