ಜನರಿಗೆ ಸೇವೆ ನೀಡುವುದರಲ್ಲಿ ಸರ್ಕಾರ ಸೋತಿದೆ : ಹೆಚ್.ವಿಶ್ವನಾಥ್ h-vishwanath
ಮೈಸೂರು : ಜನರಿಗೆ ಸೇವೆ ನೀಡುವುದರಲ್ಲಿ ಸರ್ಕಾರ ಸೋತಿದೆ. ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿ ಇದ್ದಾರೆ ಸರಿ, ಆದರೆ ಮೂರು ಜನ ಉಪ ಮುಖ್ಯಮಂತ್ರಿಗಳು ಇದ್ದಾರಲ್ವ ಅವರು ಏನು ಮಾಡುತ್ತಿದ್ದಾರೆ ಎಂದು ಎಂಎಲ್ ಸಿ ವಿಶ್ವನಾಥ್ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಹೆಚ್ಚಲು ಜನರೇ ಕಾರಣ ಎಂಬ ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಹೆಚ್.ವಿಶ್ವನಾಥ್, ಸರ್ಕಾರದ ಜವಾಬ್ದಾರಿ ಮಂತ್ರಿಯ ಬೇಜವಾಬ್ದಾರಿ ಹೇಳಿಕೆ ಇದು.
ಕೊರೊನಾ ಹೆಚ್ಚಾಗಲು ಜನರೇ ಕಾರಣ ಅಂತೀರಲ್ಲ. ಹಾಗಿದ್ರೆ ನೀವು ಏನ್ ಮಾಡ್ತಿದ್ದೀರಾ ಎಂದು ಪ್ರಶ್ನಿಸಿದರು. ಇನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಯಲ್ಲಿದ್ದಾರೆ, ಮೂರು ಜನ ಡಿಸಿಎಂ ಏನ್ ಮಾಡ್ತಿದ್ದಾರೆ.
ಅವರನ್ನ ಸುಮ್ಮನೆ ಡಿಸಿಎಂ ಮಾಡಿರೋದಾ..? ಜನರ ಮೇಲೆ ಹೊಣೆ ಹಾಕಬಾರದು. ಒಬ್ಬ ಮಂತ್ರಿ ಜನ ಕಾರಣ ಅಂತಾರೆ, ಮತ್ತೊಬ್ಬ ಮಂತ್ರಿ ಬೇರೆ ರಾಜ್ಯದ ಪರಿಸ್ಥಿತಿ ನಮ್ಮಲ್ಲಿಲ್ಲ ಅಂತಾರೆ.
ಜನರು ಬೆಡ್, ಆಕ್ಸಿಜನ್ ಸಿಗದೆ ಪರದಾಡುತ್ತಿದ್ದಾರೆ. ಇದಕ್ಕಿಂತಲು ಪರಿಸ್ಥಿತಿ ರಾಜ್ಯಕ್ಕೆ ಬರಬೇಕಾ ಎಂದು ಆರ್ ಅಶೋಕ್ ಗೂ ಟಾಂಗ್ ನೀಡಿದರು.
ರಾಜ್ಯದಲ್ಲಿ ತೀರ್ಮಾನ ತೆಗೆದುಕೊಳ್ಳೋದು ಮುಖ್ಯಮಂತ್ರಿ ಒಬ್ಬರೇ ಆದ್ರೆ ಕ್ಯಾಬಿನೆಟ್ ಯಾಕೆ ಬೇಕು..? ಕ್ಯಾಬಿನೆಟ್ ಮಿನಿಸ್ಟರ್ ಗಳೇ ಸರ್ಕಾರ. ಆದರೆ ಇಲ್ಲಿ ಏನ್ ಆಗ್ತಿದೆ.
ಕೊರೊನಾ ಬಗ್ಗೆ ರಾಜ್ಯಪಾಲರು ಮೀಟಿಂಗ್ ತೆಗೆದುಕೊಳ್ತಾರೆಂದು ಮಾಹಿತಿ ಇದೆ. ಚುನಾಯಿತ ಸರ್ಕಾರ ವಿಫಲವಾದಾಗ ಮಾತ್ರ ರಾಜ್ಯಪಾಲರು ಎಂಟ್ರಿ ಆಗ್ಬೇಕು. ಹಾಗಿದ್ರೆ ಸರ್ಕಾರ ವಿಫಲವಾಗಿದ್ಯಾ ಎಂದು ಸರ್ಕಾರಕ್ಕೆ ವಿಶ್ವನಾಥ್ ಪ್ರಶ್ನೆಗಳ ಸುರಿಮಳೆಗೈದರು.