ಅಪ್ರಾಪ್ತೆ ಮೇಲೆ ಅತ್ಯಾಚಾರ – ಕಾಮುಕನಿಗೆ 20 ವರ್ಷ ಜೈಲು ಶಿಕ್ಷೆ..!
ಹರಿಯಾಣ : 15 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನಿಗೆ ಹರಿಯಾಣದ ಹೆಚ್ಚುವರಿ ಜಿಲ್ಲಾ ಮತ್ತು ಅಧಿವೇಶನ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ವಿಧಿಸಿ 31 ಸಾವಿರ ರೂಪಾಯಿಗಳ ದಂಡ ವಿಧಿಸಿದೆ.
2019ರಲ್ಲಿ ಈ ಘಟನೆ ನಡೆದಿತ್ತು. ಅಬ್ದುಲ್ ಸಲೀಮ್ ಎಂಬಾತ ಕುರುಕ್ಷೇತ್ರ ಏರಿಯಾದಲ್ಲಿ ಬಾಲಕಿಯು ಒಬ್ಬಳೇ ಇದ್ದಾಗ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಈ ಸಂಬಂಧ ಬಾಲಕಿ ಕುಟುಂಬ ದೂರು ಸಲ್ಲಿಸಿದ ನಂತರ ಪೊಲೀಸರು ಆರೋಪಿ ವಿರುದ್ಧ IPC ಸೆ 376 (3), 506 , 452 ಅಡಿ ಕೇಸ್ ದಾಖಲು ಮಾಡಿಕೊಂಡಿದ್ದರು.