ನಿಖಿಲ್ ಕುಮಾರಸ್ವಾಮಿ ‘ರೈಡರ್’ ಸಿನಿಮಾ ತಂಡದ ಸದಸ್ಯರಿಗೂ ಕೊರೊನಾ ಪಾಸಿಟಿವ್..!
ಬೆಂಗಳೂರು: ಸ್ಯಾಂಡಲ್ ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರು ಸದ್ಯ ರೈಡರ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಆದ್ರೆ ಅವರ ತಂದೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢವಾದ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಅವರಿಗೂ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿತ್ತು. ಇದೀಗ ಅವರ ನಟನೆಯ ರೈಡರ್ ಸಿನಿಮಾ ತಂಡದ ಅನೇಕ ಸದಸ್ಯರಲ್ಲಿಯೂ ಕೊರೋನಾ ಸೋಂಕು ಕಾಣಿಸಿಕೊಂಡಿದೆ.
ಇತ್ತೀಚೆಗಷ್ಟೇ ನಿಖಿಲ್ ರೈಡರ್ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಲಡಾಕ್ ನಲ್ಲಿ ಚಿತ್ರೀಕರಣ ನಡೆದಿತ್ತು. ಅವರ ಜೊತೆಗೆ ಕೆಲಸ ಮಾಡಿದ್ದ ಚಿತ್ರತಂಡದ ಹಲವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ನಿಖಿಲ್ ಕುಮಾರಸ್ವಾಮಿಗೆ ಎರಡು ದಿನಗಳ ಮೊದಲು ಸೋಂಕು ಕಾಣಿಸಿಕೊಂಡಿತ್ತು. ಇದಾದ ಬಳಿಕ ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದರು.