ನಂಜನಗೂಡು : ಮೈಸೂರಿನಲ್ಲಿ ಕೊರೊನಾ ವೈರಸ್ ಆರ್ಭಟ ಮುಂದುವರಿದಿದ್ದು, ಇಂದು ಮತ್ತೆ 9 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.
ಸದ್ಯ ಮೈಸೂರಿನಲ್ಲಿ ಸುಮಾರು 500 ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನಲ್ಲಿಟ್ಟಿದ್ದು, ನಿನ್ನೆ ರಾತ್ರಿ ಸುಮಾರು 150 ಮಂದಿಯ ವರದಿ ಬಂದಿದೆ. ಅದರಲ್ಲಿ 9 ಮಂದಿಗೆ ಸೋಂಕು ತಗುಲಿರುವುದು ಖಚಿತಪಟ್ಟಿದೆ.
ಇದರಿಂದ ಜ್ಯುಬಿಲೆಂಟ್ ಪ್ಯಾರಾಮೆಡಿಕಲ್ಸ್ ಕಂಪನಿಯ ಉದ್ಯೋಗಿಗಳಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.








