rain ರಾಜ್ಯದಲ್ಲಿನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಈಗಾಗಲೇ ಹಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಅಲ್ಲಲ್ಲಿ ಜೋರು ಮಳೆಯಾಗಿದೆ.
ಈ ಮಧ್ಯೆ ಏಪ್ರಿಲ್ 25 ರವರೆಗೆ ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ತಿಳಿದು ಬಂದಿದೆ.
ಇದಲ್ಲದೆ ಶಿವಮೊಗ್ಗ, ಕೊಡಗು, ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ವರ್ಷಧಾರೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.










