ಕೊರೊನಾ ಹೆಚ್ಚಳ : ಮೇ 3ರವರೆಗೂ ಮತ್ತೆ ಲಾಕ್ ಡೌನ್ corona lockdown
ನವದೆಹಲಿ : ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲೇ ಇರುವ ಕಾರಣ ದೆಹಲಿಯಲ್ಲಿ ಈಗಿರುವ ಲಾಕ್ ಡೌನ್ ಅನ್ನು ಇನ್ನೂ ಒಂದು ವಾರದ ಕಾಲ ಮುಂದುವರೆಸುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.
ಕಳೆದ ಆರು ದಿನಗಳ ಹಿಂದೆ ಘೋಷಣೆ ಮಾಡಿದ್ದ ಲಾಕ್ ಡೌನ್ ಇಂದಿಗೆ ಮುಕ್ತಾಯವಾಗುವ ಹಿನ್ನಲೆಯಲ್ಲಿ ಅರವಿಂದ ಕೇಜ್ರಿವಾಲ್ ಇಂದು ಸುದ್ದಿಗೋಷ್ಠಿ ನಡೆಸಿದರು.
ಈ ವೇಳೆ ದೆಹಲಿ ಜನರನ್ನುದ್ದೇಶಿಸಿ ಮಾತನಾಡಿ, ದೆಹಲಿಯಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಆವಶ್ಯಕತೆ ಇದೆ.
ಕಳೆದ ಆರು ದಿನಗಳಂತೆ ಮುಂದಿನ ವಾರ ಕೂಡ ಲಾಕ್ ಡೌನ್ ಮುಂದುವರಿಯಲಿದೆ ಎಂದು ತಿಳಿಸಿದರು.
ಇನ್ನು ಕೋವಿಡ್ ಹೋರಾಟವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಿಗೆನಿಂತು ಎದುರಿಸುತ್ತಿದ್ದೇವೆ.
ದೆಹಲಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಆಕ್ಸಿಜನ್ ಸಮಸ್ಯೆ ಎದುರಾಗಿದೆ ಎಂದು ಹೇಳಿದರು.










