ಕನ್ನಡದ ‘ಬುಟ್ಟ ಬೊಮ್ಮ’ ಪೂಜಾ ಹೆಗ್ಡೆಗೆ ಕೋವಿಡ್ ಪಾಸಿಟಿವ್..!
ಕನ್ನಡದ ಕ್ಯೂಟ್ ಬ್ಯೂಟಿ, ಗ್ಲಾಮರಸ್ ಬೆಡಗಿ, ಸೌತ್ ಸಿನಿಮಾ ಇಂಡಸ್ಟ್ರಿಯ ಬಹುಬೇಡಿಕೆಯ ನಟಿ ಪೂಜಾ ಹೆಗ್ಡೆಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಈ ಬಗ್ಗೆ ನಮ್ಮ ‘ ಬುಟ್ಟ ಬೊಮ್ಮ’ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
‘ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಎಲ್ಲಾ ನಿಯಮಗಳನ್ನು ಪಾಲಿಸುತ್ತಿದ್ದು, ನಾನು ಮನೆಯಲ್ಲೇ ಕ್ವಾರಂಟೈನ್ ಆಗಿದ್ದೀನಿ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಹೇಳಿದ್ದಾರೆ.
‘ಈ ಸಮಯದಲ್ಲಿ ಬೆಂಬಲ ನೀಡಿದ ಮತ್ತು ಪ್ರೀತಿ ತೋರಿದ ಪ್ರತಿಯೋಬ್ಬರಿಗೂ ಧನ್ಯವಾದಗಳು. ಸದ್ಯ ಚೇತರಿಸಿಕೊಳ್ಳುತ್ತಿದ್ದೀನೆ. ಎಲ್ಲರೂ ಸುರಕ್ಷಿತವಾಗಿರಿ’ ಎಂದು ಬರೆದುಕೊಂಡಿದ್ದಾರೆ. ಪೂಜಾಗೆ ಅಭಿಮಾನಿಗಳು, ಸ್ನೇಹಿತರು ಬೇಗ ಗುಣಮುಖರಾಗಿ ಎಂದು ಹಾರೈಸುತ್ತಿದ್ದಾರೆ.
ಪೂಜಾ ಹೆಗ್ಡೆ ಸಿನಿಮಾ ವಿಚಾರಕ್ಕೆ ಬಂದ್ರೆ ಪೂಜಾ ಸದ್ಯ ಬ್ಯುಸಿಯೆಸ್ಟ್ ನಟಿಯರಲ್ಲಿ ಒಬ್ಬರು. ಆಚಾರ್ಯ ಸಿನಿಮಾದಲಲ್ಲಿ ರಾಮ್ ಚರಣ್ ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ದಳಪತಿ ವಿಜಯ್ ನಟನೆಯ 65ನೇ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇವರ ನಟನೆಯ ರಾಧೆ ಶ್ಯಾಮ್ ಸಿನಿಮಾ ಕೂಡ ರಿಲೀಸ್ ಆಗಬೇಕಾಗಿದೆ.








