ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಐಟಿ ಕಂಪನಿಗಳು ತನ್ನ ಉದ್ಯೋಗಿಗಳಿಗೆ ‘ವರ್ಕ್ ಫ್ರಂ ಹೋಮ್’ ಮಾಡಲು ಸೂಚಿಸಿದೆ. ಆದರೆ ಐಟಿ ರಾಜಧಾನಿ ಎಂದು ಕರೆಯಲ್ಪಡುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಟೆಕ್ಕಿಗಳಿಗೆ ಪಿಂಕ್ ಸ್ಲಿಪ್ ನೀಡಲಾಗುತ್ತಿದೆ.
ಪ್ರತಿಷ್ಠಿತ ಕಂಪನಿಯೊಂದರ ಮಹಿಳಾ ಸಾಫ್ಟ್ ವೇರ್ ಉದ್ಯೋಗಿ ಕೆಲಸ ಕಳೆದುಕೊಂಡು ಕಂಗೆಟ್ಟಿದ್ದು, ಟ್ವೀಟ್ ಮುಖಾಂತರ ಕಾರ್ಮಿಕ ಇಲಾಖೆಯ ಸಹಾಯವನ್ನು ಕೋರಿದ್ದಾರೆ.
ಲಾಕ್‍ಡೌನ್ ಅವಧಿಯಲ್ಲಿ ಕಾರಣವಿಲ್ಲದೆ ನಮ್ಮನ್ನು ಕೆಲಸದಿಂದ ವಜಾಗೊಳಿಸಿದ್ದು, ಉದ್ಯೋಗ, ಸಂಬಳವಿಲ್ಲದೆ ನಾವು ಹೇಗೆ ಬದುಕಬೇಕು? ದಯವಿಟ್ಟು ನಮ್ಮ ಸಹಾಯಕ್ಕೆ ಬನ್ನಿ ಎಂದು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಪಿ. ಮಣಿವಣ್ಣನ್ ಅವರನ್ನು ಟ್ಯಾಗ್ ಮಾಡಿ ಟೆಕ್ಕಿ ಕಾಡುಗೋಡಿ ನಿವಾಸಿ ದೀಪಾ ವೆಂಕಟೇಶ್ ರೆಡ್ಡಿ ಎಂಬವರು ಪತ್ರವನ್ನು ಬರೆದು ಟ್ವೀಟ್ ಮಾಡಿದ್ದಾರೆ.
ಸಾಂಕ್ರಾಮಿಕ ಪಿಡುಗು ಕಾಡುತ್ತಿರುವ ಈ ಸಂದರ್ಭದಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುತ್ತಿರುವ ಬಗ್ಗೆ ನಿಮ್ಮ ಗಮನಕ್ಕೆ ತರುತ್ತಿದ್ದೇನೆ. ಬೆಳ್ಳಂದೂರು ರಸ್ತೆ ಎಕೋಸ್ಪೇಸ್‍ನಲ್ಲಿರುವ ಎಂ.ಎನ್.ಸಿ ಕಂಪನಿಯಲ್ಲಿ ನಾನು ಕೆಲಸ ಮಾಡುತ್ತಿದ್ದೆ. ನಾನು ಸೇರಿದಂತೆ ನನ್ನ ಬ್ಯಾಚ್‍ನಲ್ಲಿದ್ದ 15 ಮಂದಿಯನ್ನು ಕಂಪನಿ ಕೆಲಸದಿಂದ ವಜಾ ಮಾಡಿದೆ. ಸಾಂಕ್ರಾಮಿಕ ಸೋಂಕು ಇರುವ ಸಂದರ್ಭದಲ್ಲಿ ಅನುಸರಿಸಬೇಕಾದ ಅಗತ್ಯಕ್ರಮವನ್ನು ಅನುಸರಿಸಿಲ್ಲ ಎಂದಿದ್ದಾರೆ.
ವಿನಾಕಾರಣ ಕೆಲಸದಿಂದ ವಜಾಗೊಳಿಸಿದ್ದಲ್ಲದೇ, ಎಲ್ಲರಿಗೂ ಒಂದೇ ರೀತಿಯ ಮಾನದಂಡ ಅನುಸರಿಸಲಾಗಿದೆ. ಕಂಪನಿಯು ಎಲ್ಲರಿಗೂ 5,600 ರೂಪಾಯಿ ಫೈನಲ್ ಸೆಟ್ಲ್ ಮೆಂಟ್ ಮೊತ್ತ ಎಂದು ನೀಡಿದೆ ರಿಲೀವಿಂಗ್ ಲೆಟರ್ ಮತ್ತು ಫುಲ್ ಅಂಡ್ ಫೈನಲ್ ಸೆಟ್ಲ್‌ಮೆಂಟ್ ಲೆಟರ್ ಅನ್ನು ಕಂಪನಿ ಇ-ಮೇಲ್ ಮಾಡಿದ್ದು, ಎಲ್ಲಾ ಪ್ರಕ್ರಿಯೆ ಮುಗಿದಿದೆ ಎಂದು ತಿಳಿಸಿದೆ. ಈ ಸಂದರ್ಭದಲ್ಲಿ ಆಹಾರ, ವಸತಿ ನೋಡಿಕೊಂಡು ಬದುಕುವುದು ಕಷ್ಟವಾಗಿದೆ. ನಾವು 16 ಮಂದಿ ಮಾತ್ರ ಕೆಲಸ ಕಳೆದುಕೊಂಡಿದ್ದು, ಉಳಿದ 5 ಮಂದಿ ಇನ್ನೂ ಕೆಲಸ ಮಾಡುತ್ತಿದ್ದಾರೆ. ದಯವಿಟ್ಟು ನಮಗೆ ಸಹಾಯ ಮಾಡಿ ಎಂದು ಟೆಕ್ಕಿ ಪತ್ರದಲ್ಲಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮಣಿವಣ್ಣನ್ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದು, ನಿಮ್ಮದು ಐಟಿ ಕಂಪನಿಯೇ, ಹಾಗಿದ್ದರೆ ನೀವು ಕಾರ್ಮಿಕ ವರ್ಗಕ್ಕೆ ಸೇರುವುದಿಲ್ಲ. ನಿಮ್ಮ ಸಂಸ್ಥೆಯ ಒಪ್ಪಂದ ಪ್ರಕಾರ ನಡೆದುಕೊಳ್ಳಬೇಕಾಗುತ್ತದೆ ಎಂದಿರುವ ಅವರು ಕಾರ್ಮಿಕ ಸಹಾಯವಾಣಿಗೆ ಟ್ಯಾಗ್ ಮಾಡಿ ಸ್ಥಳೀಯ ಕಾರ್ಮಿಕ ಅಧಿಕಾರಿಗೆ ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಕಾರ್ಮಿಕ ಇಲಾಖೆಯ ಸಹಾಯವಾಣಿ(9333333684), ಈ ಸಮಸ್ಯೆ ಬಗ್ಗೆ ಸಂಬಂಧಪಟ್ಟ ಕಾರ್ಮಿಕ ಅಧಿಕಾರಿಗೆ ದೂರು ಮುಟ್ಟಿಸಲಾಗಿದೆ. ಟೆಕ್ಕಿಯನ್ನು ಸಂಪರ್ಕಿಸಿ, ಈ ಬಗ್ಗೆ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಕಾರ್ಮಿಕ ಇಲಾಖೆಯ ಲಿಂಕ್ (https://twitter.com/Karmika_Sahaya) ಹಾಕಿ ರೀಟ್ವೀಟ್ ಮಾಡಿದೆ.
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ
ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...








