ಅವ್ಯವಸ್ಥೆಯ ಆಗರವಾಗಿದೆ ಕೋಲಾರ ಕೋವಿಡ್ ಜಿಲ್ಲಾಸ್ಪತ್ರೆ
ಕೋಲಾರ : ಚಿನ್ನದ ನಾಡು ಕೋಲಾರದಲ್ಲೂ ಕೊರೊನಾ ಮರಣಕೇಕೆ ಮುಂದುವರೆದಿದೆ.
ಜಿಲ್ಲೆಯಲ್ಲಿ ಪ್ರತಿದಿನ ಸೋಂಕಿತರ ಸಂಖ್ಯೆಯ ಜೊತೆ ಜೊತೆಯಾಗಿ ಹೆಮ್ಮಾರಿ ಕೊರೊನಾದಿಂದ ಮೃತಪಡುತ್ತಿರುವವರ ಸಂಖ್ಯೆ ಡಬಲ್ ಆಗುತ್ತಿದೆ. ಇದಕ್ಕೆ ಸೂಕ್ತ ನಿರ್ವಹಣೆ ಇಲ್ಲದಿರುವುದೇ ಕಾರಣ ಎಂದು ಹೇಳಲಾಗುತ್ತಿದೆ.
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಷಿಜನ್, ವೆಂಟಿಲೇಟರ್ ಕೊರತೆ ಇದೆ. ಇದರಿಂದಲೇ ಸೋಂಕಿತರು ಮೃತಪಡುತ್ತಿದ್ದಾರೆ. ಇದೀಗ ಕೋಲಾರ ಕೋವಿಡ್ ಜಿಲ್ಲಾಸ್ಪತ್ರೆಯಲ್ಲಿ ಅವ್ಯವಸ್ಥೆ ಬಯಲಿಗೆ ಬಂದಿದೆ. ಆಸ್ಪತ್ರೆಯ ಈ ಬಗ್ಗೆ ವಿಡಿಯೋ ಮಾಡಿ ಜನವಾದಿ ಮಹಿಳಾ ಸಂಘಟನೆ ಮುಖ್ಯಸ್ಥೆ ಗೀತಾ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಗೀತಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದ್ರೆ ಅಲ್ಲಿ ಸೂಕ್ತ ವ್ಯವಸ್ಥೆಯ ಕೊರತೆ ಇದ್ದು, ಈ ಬಗ್ಗೆ ವಿಡಿಯೋ ಮಾಡಿದ್ದಾರೆ.
ತಮ್ಮ ವಿಡಿಯೋದಲ್ಲಿ ಗೀತಾ ಅವರು, ಆಸ್ಪತ್ರೆಯಲ್ಲಿ ಸರಿಯಾಗಿ ಆಕ್ಸಿಜನ್ ಸರಬರಾಜು ಹಾಗೂ ಚಿಕಿತ್ಸೆ ಇಲ್ಲವೆಂದು ಆರೋಪ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ಜಿಲ್ಲಾಡಳಿತ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.









